ಖಾಸಗಿ ಕೃಷಿ ಕಾಲೇಜು ಮುಚ್ಚಲು ಆಗ್ರಹ

7

ಖಾಸಗಿ ಕೃಷಿ ಕಾಲೇಜು ಮುಚ್ಚಲು ಆಗ್ರಹ

Published:
Updated:
ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಖಾಸಗಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ  ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.

ಶಿವಮೊಗ್ಗ: ಖಾಸಗಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು  ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.

ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಕಳೆದ 12 ದಿನಗಳಿಂದ ನಿರಂತರವಾಗಿ ಧರಣಿ ನಡೆಸುತ್ತಿರುವ ವಿದ್ಯಾರ್ಥಿಗಳು ಬುಧವಾರ ವಿಶ್ವವಿದ್ಯಾಲಯ ಆವರಣದಿಂದ ಜಿಲ್ಲಾಧಿಕಾರಿ ಕಚೇರಿ ಆವರಣದವರೆಗೆ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಿದರು. ಈ ಪ್ರತಿಭಟನಾ ರ್‍ಯಾಲಿಗೆ ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಶಿವಮೊಗ್ಗ ಕೃಷಿ ಕಾಲೇಜು, ಮೂಡಿಗೆರೆಯ ತೋಟಗಾರಿಕೆ ಕಾಲೇಜು, ಪೊನ್ನಂಪೇಟೆಯ ಅರಣ್ಯ ಕಾಲೇಜು ಹಾಗೂ ಹಿರಿಯೂರಿನ ತೋಟಗಾರಿಕೆ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಕೈ ಜೋಡಿಸಿದರು.

ಸರ್ಕಾರಿ ಕೃಷಿ ಮತ್ತು ತೋಟಗಾರಿಕೆ ಕಾಲೇಜು ವಿದ್ಯಾರ್ಥಿಗಳು ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಕಳೆದ ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿ ಖಾಸಗಿ ಕೃಷಿ ಕಾಲೇಜು ಸ್ಥಾಪನೆ ನಿಷೇಧಿಸಬೇಕು. ಪ್ರತಿವರ್ಷ ಇಲಾಖೆ ಯಲ್ಲಿ ಖಾಲಿಯಾಗುವ ಹುದ್ದೆಗಳನ್ನು ಭರ್ತಿ ಮಾಡಬೇಕು, ಕೃಷಿ, ಕೃಷಿ ಎಂಜಿನಿಯರಿಂಗ್, ಕೃಷಿ ಮಾರುಕಟ್ಟೆ, ಅರಣ್ಯ ವಿಜ್ಞಾನ, ಆಹಾರ ವಿಜ್ಞಾನ, ಕೃಷಿ ಜೈವಿಕ ತಂತ್ರಜ್ಞಾನ ಮತ್ತು ರೇಷ್ಮೆ ಕೃಷಿ ಪದವೀಧರರಿಗೆ ಸೂಕ್ತ ಹುದ್ದೆ ಸೃಷ್ಟಿಸಬೇಕು. ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಬೇಕು. ಜತೆಗೆ ಇನ್ನಿತರೆ ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೇ ಎಲ್ಲ ಖಾಸಗಿ ಕೃಷಿ ಕಾಲೇಜುಗಳನ್ನು ಮುಚ್ಚಿಸಬೇಕು. ಅಖಿಲ ಭಾರತೀಯ ಕೃಷಿ ಪರಿಷತ್ ಸ್ಥಾಪಿಸಬೇಕು. ಕೃಷಿ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿ ತರಬೇಕು. ಖಾಲಿ ಇರುವ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !