ಶುಕ್ರವಾರ, ಸೆಪ್ಟೆಂಬರ್ 18, 2020
24 °C

ಕಳಪೆ ಚರಂಡಿ ದುರಸ್ತಿಗೆ ಎಸ್‌ಡಿಪಿಐ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: 32ನೇ ವಾರ್ಡ್‌ ವ್ಯಾಪ್ತಿಯಲ್ಲಿ ಒಡೆದು ಹೋಗಿರುವ, ಕಳಪೆ ಗುಣಮಟ್ಟದ ಚರಂಡಿಗಳನ್ನು ದುರಸ್ತಿಗೊಳಿಸಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಅಧ್ಯಕ್ಷ ಇಸಾಕ್ ಅಹಮದ್‌ ನೇತೃತ್ವದಲ್ಲಿ ಮಂಗಳವಾರ ನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.

ಟಿಪ್ಪು ನಗರದಲ್ಲಿ ಬಹಳಷ್ಟು ಚರಂಡಿಗಳು ಹೊಡೆದು ಹೋಗಿವೆ. ಕೆಲವು ಕಳಪೆ ಕಾಮಗಾರಿ ಪರಿಣಾಮ ಅಲ್ಲಲ್ಲಿ ಕುಸಿದಿವೆ. ನೀರು ಹರಿಯದೇ ಮುಚ್ಚಿ ಹೋಗಿವೆ. ಹಿಂದಿನ ವರ್ಷದ ಮಳೆಗಾಲದಲ್ಲಿ ಮಳೆ ನೀರು, ಚರಂಡಿ ನೀರು ಮನೆಗಳಿಗೆ ನುಗ್ಗಿ ಹಾನಿಯಾಗಿತ್ತು. ಈ ಬಾರಿ ಮಳೆಗಾಲ ಆರಂಭಕ್ಕೂ ಮೊದಲೆ ಮನವಿ ನೀಡಿದ್ದರೂ ಗಮನಹರಿಸಿಲ್ಲ ಎಂದು ಆರೋಪಿಸಿದರು.

ಅಂಬೇಡ್ಕರ್ ನಗರ, ಟಿಪ್ಪುನಗರದ ಹಲವು ಭಾಗಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವವರ ನಿರ್ಲಕ್ಷ್ಯದ ಪರಿಣಾಮ ಸಮಸ್ಯೆ ಹೆಚ್ಚಾಗಿದೆ. ತಕ್ಷಣ ನೀರಿನ ಸಮಸ್ಯೆ ಬಗೆಹರಿಸಬೇಕು. ರಸ್ತೆಗಳು ಸಂಪೂರ್ಣ ಹಾಳಾಗಿವೆ. ವಾಹನ ಸಂಚಾರ ದಟ್ಟಣೆ ಪರಿಣಾಮ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು