ಮಂಗಳವಾರ, ಏಪ್ರಿಲ್ 13, 2021
23 °C

ಮೂಲಸೌಲಭ್ಯಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಮೂಲಸೌಲಭ್ಯ ಕಲ್ಪಿಸಲು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಸಹ್ಯಾದ್ರಿ ಕಾಲೇಜು 75 ವರ್ಷದ ಇತಿಹಾಸ ಹೊಂದಿದೆ. ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಮೂಲ ಸೌಲಭ್ಯಗಳಿಲ್ಲದೆ ಪರದಾಡುವಂತಾಗಿದೆ. ಶೌಚಾಲಯ ವ್ಯವಸ್ಥೆ ಇಲ್ಲ. ಹೊಸದಾಗಿ ನಿರ್ಮಿಸಿರುವ ಶೌಚಾಲಯ ಅವೈಜ್ಞಾನಿಕವಾಗಿದೆ. ಅವ್ಯವಸ್ಥೆಯಿಂದ ಕೂಡಿದೆ. ಸ್ವಚ್ಛತೆ ಇಲ್ಲ. ಕ್ಯಾಂಟಿನ್ ವ್ಯವಸ್ಥೆ ಸರಿ ಇಲ್ಲ ಎಂದು ಆರೋಪಿಸಿದರು.

ಕಾಲೇಜು ಆರಂಭವಾಗಿ ತಿಂಗಳು ಕಳೆದರೂ ತರಗತಿಗಳು ಆರಂಭವಾಗಿಲ್ಲ. ಪ್ರಯೋಗಾಲಯ ಇಲ್ಲ, ಲೈಬ್ರರಿ ವ್ಯವಸ್ಥೆ ಸರಿ ಇಲ್ಲ, ತಕ್ಷಣವೇ ಮೂಲಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ಎಬಿವಿಪಿ ಜಿಲ್ಲಾ ಸಂಚಾಲಕ ಎಲ್.ಎನ್.ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.