ಮಂಗಳವಾರ, ಫೆಬ್ರವರಿ 25, 2020
19 °C

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಪೌರತ್ವ ಕಾಯ್ದೆ ವಿರೋಧಿಸಿ ಮುತ್ತಹಿದ ಮಹಾಝ್ ಸಂಘಟನೆ ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿ, ರಾಷ್ಟ್ರಪತಿ ಅಂಕಿತ ಹಾಕಿರುವ ಈ ಕಾಯ್ದೆ ಸಂವಿಧಾನದ ಆಶಯದ ವಿರುದ್ಧವಾಗಿದೆ. ದೇಶದ ನೈತಿಕ, ಸಂವಿಧಾನಿಕ, ಜಾತ್ಯತೀತ ಪರಂಪರೆಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಕಾಯ್ದೆಯ ಹಿಂದೆ ಕೋಮು ಧ್ರುವೀಕರಣ ಮತ್ತು ಮುಸ್ಲಿಮರನ್ನು ಬಲಿಪಶುಗಳನ್ನಾಗಿಸುವ ಹುನ್ನಾರ ಅಡಗಿದೆ. ಇದರ ಹಿಂದೆ ರಾಜಕೀಯ ದುರುದ್ದೇಶವೂ ಅಡಗಿದೆ. ದೇಶದ ಆರ್ಥಿಕ ಹಾಗೂ ರಾಜಕೀಯ ಪರಿಸ್ಥಿತಿ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಆರೋಪಿಸಿದರು.

ಸಂಘಟನೆಯ ಮುಖಂಡರಾದ ಪರ್ವೀಜ್ ಅಹಮದ್, ಎಚ್.ಕೆ.ಅಬ್ದುಲ್ ವಾಜೀದ್, ಹಾಮೀದ್ ಮತ್ತು ಇಕ್ಬಲ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು