ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಲಿಬಾರ್ ಮಾಡಿದ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯ

Last Updated 21 ಡಿಸೆಂಬರ್ 2019, 10:36 IST
ಅಕ್ಷರ ಗಾತ್ರ

ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಜನರ ಮೇಲೆ ಗೋಲಿಬಾರ್ ಮಾಡಿ ಇಬ್ಬರು ಅಮಾಯಕರನ್ನು ಬಲಿ ಪಡೆದ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮೃತ ವ್ಯಕ್ತಿಗಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದುಒತ್ತಾಯಿಸಿ ಶನಿವಾರ ಸಿಟಿಜನ್ಸ್ ಯುನೈಟೆಡ್ ಮೂವ್‌ಮೆಂಟ್ಕಾರ್ಯಕರ್ತರುಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಕೇಂದ್ರಸರ್ಕಾರಜಾರಿಗೆ ತಂದಿರುವಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್‌ಸಿವಿರೋಧಿಸಿ ದೇಶದ ಎಲ್ಲೆಡೆ ಪ್ರತಿಭಟನೆ, ಪಂಜಿನ ಮೆರವಣಿಗೆ ನಡೆಸಲಾಗಿದೆ.
ಜಾತಿ ಆಧಾರದ ಮೇಲೆ ಬಿಜೆಪಿ ದೇಶ ಒಡೆಯುವ ಹುನ್ನಾರಮಾಡುತ್ತಿದೆ.ರಾಷ್ಟ್ರಕ್ಕೆ ಮಾರಕವಾಗಿರುವ ತಿದ್ದುಪಡಿ ಕಾಯ್ದೆ ಕೈಬಿಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರಒತ್ತಾಯಪೂರ್ವಕವಾಗಿ ಜನರ ಮೇಲೆಹಿಂದುತ್ವ ಅಜೆಂಡಾ ಹೇರುತ್ತಿದೆ. ಕಾಯ್ದೆ ವಿರೋಧಿಸಿ ಶಾಂತಿಯುತ ಪ್ರತಿಭಟನೆನಡೆಸುತ್ತಿದ್ದವರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಪೊಲೀಸರು ಲಾಠಿ ಚಾರ್ಜ್‌, ಗೋಲಿಬಾರ್ ನಡೆಸಿದ್ದಾರೆ.ಮಂಗಳೂರಿನಲ್ಲಿಅಬ್ದುಲ್ ಜಲೀಲ್ ಮತ್ತು ನೌಶೇರ್ಅವರನ್ನು ಕೊಲ್ಲಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ, ರಾಜ್ಯ ಸರ್ಕಾರಗಳಸೂಚನೆಯಂತೆ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ.ಇದು ಹಿಟ್ಲರ್ ನೀತಿ. ಇಂತಹ ನೀತಿ ತಡೆಯದಿದ್ದರೆ ದೇಶಕ್ಕೆ ಮಾರಕ.
ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ಮೃತರ ಕುಟುಂಬಕ್ಕೆ ತಲಾ ₨ 1 ಕೋಟಿ ಪರಿಹಾರ,ಸರ್ಕಾರಿನೌಕರಿ ನೀಡಬೇಕು ಎಂದುಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT