ಬುಧವಾರ, ಫೆಬ್ರವರಿ 19, 2020
30 °C

ಶಿವಮೊಗ್ಗ: ಅಂತಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಮಹಾತ್ಮ ಗಾಂಧೀಜಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ದಕ್ಷಿಣ ಮತ್ತು ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಶುಕ್ರವಾರ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ಪ್ರತಿಭಟನೆ ನಡೆಸಿದರು.

ಅನಂತ್ ಕುಮಾರ್ ಹೆಗಡೆ ದೇಶದ್ರೋಹದ ಹೇಳಿಕೆ ನೀಡಿದ್ದಾರೆ. ಗಾಂಧೀಜಿ ಮಹಾಪುರುಷ. ಸ್ವಾತಂತ್ರ್ಯಕ್ಕಾಗಿ ಹೊರಾಡಿದ ಮಹಾತ್ಮ. ಅಂತಹವರ ಕುರಿತು ನೀಡಿದ ಹೇಳಿಕೆ ಖಂಡನೀಯ. ಅವರ ವಿರುದ್ಧ  ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಹಿಂದೆ ರಾಷ್ಟ್ರದ ಪವಿತ್ರ ಗ್ರಂಥ, ಸಂವಿಧಾನವನ್ನೇ ಬುಡಮೇಲು ಮಾಡುವ ಪ್ರಯತ್ನಿಸುತ್ತೇನೆ ಎಂದು ಹೇಳಿದ್ದರು. ಅವರ ವರ್ತನೆ, ಅವಿವೇಕತನದಿಂದ ಕೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡರಾದ ಪಂಡಿತ್ ವಿ.ವಿಶ್ವನಾಥ್, ಬಿ.ನಾಗರಾಜ್, ಎನ್.ರಮೇಶ್, ರಮೇಶ್ ಹೆಗ್ಡೆ, ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ, ಎಚ್.ಸಿ.ಯೋಗೀಶ್‌, ರಾಮೇಗೌಡ, ಕೆ.ರಂಗನಾಥ್‌ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು