ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ಆಕ್ರೋಶ

Last Updated 15 ಫೆಬ್ರುವರಿ 2020, 13:40 IST
ಅಕ್ಷರ ಗಾತ್ರ

ಶಿವಮೊಗ್ಗ: ಕೇಂದ್ರ, ರಾಜ್ಯಸರ್ಕಾರದಜನವಿರೋಧಿ ನೀತಿ ಖಂಡಿಸಿ ದಕ್ಷಿಣ ಮತ್ತು ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಕಾರ್ಯಕರ್ತರುಶನಿವಾರ ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಮತ್ತು ಮುಂಬಡ್ತಿ ಹಕ್ಕುಮೊಟಕುಗೊಳಿಸಲಾಗಿದೆ. ಎಲ್‌ಪಿಜಿಸಿಲಿಂಡರ್ ದರ ಅತ್ಯಂತ ಹೆಚ್ಚುಏರಿಕೆ ಮಾಡಲಾಗಿದೆ.ಜನವಿರೋಧಿ ಆಡಳಿತದ ಪರಿಣಾಮ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ದೇಶದ ಪ್ರತಿ ಬೀದಿಯಲ್ಲೂ ಅಂತರಯುದ್ಧದ ಸ್ಥಿತಿ ನಿರ್ಮಾಣವಾಗಿದೆ. ಶಾಂತಿ ಮತ್ತು ಸಮೃದ್ಧಿಗೆ ಧಕ್ಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಮಾಡುವಲ್ಲಿವಿಫಲವಾಗಿದೆ. ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ, ಪೆಟ್ರೋಲ್-ಡಿಸೇಲ್ ಏರಿಕೆ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ದೇಶದ ಜನರು ತತ್ತರಿಸಿ ಹೋಗಿದ್ದಾರೆ. ದೇಶದ ಅರ್ಥ ವ್ಯವಸ್ಥೆ ಹಾಳಾಗಿದೆ ಆರ್ಥಿಕ ತುರ್ತು ಪರಿಸ್ಥಿತಿ ಇದೆ ಎಂದು ದೂರಿದರು.

ದಕ್ಷಿಣ ಬ್ಲಾಕ್ ಸಮಿತಿಯ ಅಧ್ಯಕ್ಷ ಪಂಡಿತ್ ವಿ.ವಿಶ್ವನಾಥ್ (ಕಾಶಿ), ಉತ್ತರ ಬ್ಲಾಕ್ ಸಮಿತಿ ಅಧ್ಯಕ್ಷ ಬಿ.ನಾಗರಾಜ್, ಪಾಲಿಕೆ ಸದಸ್ಯರಾದ ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ, ಪಕ್ಷದ ಮುಖಂಡರಾದ ಎಲ್.ರಾಮೇಗೌಡ, ಸಿ.ಎಸ್. ಚಂದ್ರಭೂಪಾಲ, ಜಮೀಲಾಖಾನಂ, ಇಮ್ತಿಯಾಜ್, ಚೇತನ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT