ಬುಧವಾರ, ಜನವರಿ 22, 2020
25 °C

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಧರ್ಮದ ಆಧಾರದಲ್ಲಿ ಮುಸ್ಲಿಮೇತರ ಅಕ್ರಮ ವಲಸಿಗರಿಗೆ ಭಾರತದಪೌರತ್ವ ನೀಡುವ ಮಸೂದೆ ವಿರೋಧಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು  ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಭಾರತದ ಸಂವಿಧಾನದ ಮೇಲೆ ಕೋಮುವಾದದ ಪ್ರಹಾರ ನಡೆಸುವ ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ತರಬಾರದು. ದೇಶದ ಮುಸ್ಲಿಮರನ್ನೇ ಗುರಿಯಾಗಿಸಿಕೊಂಡ ಈ ಮಸೂದೆಯಲ್ಲಿ ಧರ್ಮದ ಆಧಾರದ ಮೇಲೆ ದೇಶ ಹೊಡೆಯುವ ತಂತ್ರ ಅಡಗಿದೆ ಎಂದು ಆರೋಪಿಸಿದರು.

ಆಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶಗಳಲ್ಲಿ ಧಾರ್ಮಿಕ ಶೋಷಣೆಗೆ ಒಳಗಾಗಿ ಭಾರತಕ್ಕೆ ಬಂದ ಹಿಂದೂ, ಜೈನ, ಬೌದ್ದ, ಕ್ರಿಶ್ಚಿಯನ್, ಸಿಖ್, ಪಾರ್ಸಿ ಸಮುದಾಯದವರು ಭಾರತದಲ್ಲಿ 6 ವರ್ಷಗಳಿಂದ ನೆಲೆಸಿದ್ದರೆ ಅಂಥವರು ಭಾರತದ ಪೌರತ್ವಕ್ಕೆ ಅರ್ಜಿ ಸಲ್ಲಿಸಬಹುದು. ದೇಶದ ಮುಸ್ಲಿಮರನ್ನೇ ಗುರಿಯಾಗಿಸಿಕೊಂಡು ಮಸೂದೆ ರೂಪಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೌರತ್ವ ತಿದ್ದುಪಡಿ ಮಸೂದೆ ಸಂವಿಧಾನದ ಮೂಲತತ್ವಕ್ಕೆ ವಿರುದ್ಧವಾಗಿದೆ. ದಶಕಗಳಿಂದ ಭಾರತದಲ್ಲಿ ನೆಲೆಸಿದ್ದರೂ ಒಂದು ಧರ್ಮಕ್ಕೆ ಸೇರಿದವರು ಭಾರತೀಯ ಪೌರತ್ವ ಪಡೆಯುವಲ್ಲಿ ವಂಚಿತರಾಗುತ್ತಾರೆ. ಇಂತಹ ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ತರಬಾರದು ಎಂದು ಒತ್ತಾಯಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು