ಕಾಲೇಜು ಉಪನ್ಯಾಸಕರ ಪ್ರತಿಭಟನೆ

7
ಭಾರತ ಉನ್ನತ ಶಿಕ್ಷಣ ಆಯೋಗ ಕಾಯ್ದೆ ಜಾರಿಗೆ ವಿರೋಧ

ಕಾಲೇಜು ಉಪನ್ಯಾಸಕರ ಪ್ರತಿಭಟನೆ

Published:
Updated:
Deccan Herald

ರಾಮನಗರ: ಭಾರತ ಉನ್ನತ ಶಿಕ್ಷಣ ಆಯೋಗ ಕಾಯ್ದೆ–2018 ಅನ್ನು ಹಿಂಪಡೆಯುವಂತೆ ಆಗ್ರಹಿಸಿ ಅಖಿಲ ಭಾರತ ವಿಶ್ವವಿದ್ಯಾಲಯ ಮತ್ತು ಕಾಲೇಜು ಶಿಕ್ಷಕರ ಒಕ್ಕೂಟದ ಕರೆಯ ಮೇರೆಗೆ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಧ್ಯಾಪಕರು ಶುಕ್ರವಾರ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಲು ತೀರ್ಮಾನಿಸಿರುವ ಈ ಕಾಯ್ದೆಯು ಸರ್ಕಾರದ ಪ್ರತಿಗಾಮಿ ನೀತಿಯಂತೆ ಕಂಡು ಬರುತ್ತಿದೆ. ಇದರಲ್ಲಿರುವ ಹಲವಾರು ನಿಬಂಧನೆಗಳು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಮಾರಕವಾಗಿದೆ ಹಾಗೂ ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸುವ ಹುನ್ನಾರವಾಗಿದೆ ಎಂದು ಆರೋಪಿಸಿದರು.

ಇದಲ್ಲದೇ ಶಿಕ್ಷಕರು ಮತ್ತು ಶಿಕ್ಷಣ ಕ್ಷೇತ್ರದ ಹಲವಾರು ನ್ಯಾಯೋಚಿತ ಬೇಡಿಕೆಗಳು ಈಡೇರದೇ ಎಂಎಚ್‌್ಆರ್‌ಡಿ, ಯುಜಿಸಿಯ ಹಂತದಲ್ಲಿ ನೆನೆಗುದಿಗೆ ಬಿದ್ದಿವೆ. ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರ, ಶಿಕ್ಷಕರ ಬೇಡಿಕೆಗಳ ಕುರಿತು ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಬೇಡಿಕೆಗಳು: ಉದ್ದೇಶಿತ ಕಾಯ್ದೆಯನ್ನು ಹಿಂದಕ್ಕೆ ಪಡೆಯಬೇಕು. ಏಳನೇ ವೇತನ ಆಯೋಗದ ಅನುಷ್ಠಾನಕ್ಕೆ ಶೇಕಡಾ ನೂರರಷ್ಟು ಸಹಾಯ ಧನವನ್ನು ನೀಡಬೇಕು. ಹಂಗಾಮಿ, ಅರೆಕಾಲಿಕ, ಗುತ್ತಿಗೆ ಮತ್ತು ಅತಿಥಿ ಉಪನ್ಯಾಸಕರಿಗೆ ಸಮಾನಾಂತರ ವೇತನ ಮತ್ತು ಸೇವಾ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ, ಹಳೆಯ ಪಿಂಚಣಿ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತರಬೇಕು. ಆರನೇ ವೇತನ ಆಯೋಗದ ಅನುಷ್ಠಾನದಲ್ಲಿ ಆಗಿರುವ ನ್ಯೂನತೆಗಳನ್ನು ಸರಿಪಡಿಸಬೇಕು ಎಂದು ತಿಳಿಸಿದರು.

ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಖಾಲಿಯಿರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಬೇಕು. ಶಿಕ್ಷಣದ ಖಾಸಗೀಕರಣ ಮತ್ತು ವ್ಯಾಪಾರೀಕರಣವನ್ನು ನಿಲ್ಲಿಸಿ ಜಾತ್ಯಾತೀತ ಮತ್ತು ಪ್ರಜಾಪ್ರಭುತ್ವದ ಆಶಯಗಳ ನೆಲೆಗಟ್ಟಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು ಎಂದು ಅಧ್ಯಾಪಕ ಕಾರ್ಯದರ್ಶಿ ಡಿ.ಜಿ. ಸುಮಾ ಆಗ್ರಹಿಸಿದರು.
ಕಾಲೇಜಿನ ಬೋಧಕ ಸಿಬ್ಬಂದಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !