ರಾಮನಗರ: ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

7

ರಾಮನಗರ: ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

Published:
Updated:
Deccan Herald

ರಾಮನಗರ: ಪೆಟ್ರೋಲ್, ಡೀಸೆಲ್‌ , ಅಡುಗೆ ಅನಿಲ ದರ ಏರಿಕೆ ವಿರೋಧಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ನಗರದ ಐಜೂರು ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರತಿಕೃತಿ ದಹಿಸಿದ ಕಾರ್ಯಕರ್ತರು, ತೈಲ ದರ ಏರಿಕೆಯಿಂದ ಸಾರ್ವಜನಿಕರಿಗೆ ಹೊರೆ ಆಗುತ್ತಿದೆ. ಹೀಗಾಗಿ ಇವುಗಳ ದರ ಇಳಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಮುಖಂಡ ಡಿ.ಜಿ. ಕುಮಾರ್‌ ಮಾತನಾಡಿ, ಪೆಟ್ರೋಲ್‌, ಡೀಸೆಲ್‌ ಬೆಲೆಗಳ ಏರಿಕೆಯಿಂದಾಗಿ ಜನಸಾಮಾನ್ಯರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ದೇಶದ ಬಹುತೇಕ ಸಾಗಣೆ ವ್ಯವಸ್ಥೆಯು ರಸ್ತೆ ಸಾರಿಗೆ ಮೇಲೆ ಅವಲಂಬಿತವಾಗಿದ್ದು, ತೈಲ ಬೆಲೆ ಏರಿದಷ್ಟೂ ದಿನಬಳಕೆಯ ವಸ್ತುಗಳ ಬೆಲೆಯೂ ಏರುತ್ತಲೇ ಇದೆ. ಕೇಂದ್ರ ಸರ್ಕಾರವು ಅಂತರರಾಷ್ಟ್ರೀಯ ಮಾರುಕಟ್ಟೆ ದರ ಆಧರಿಸಿ ಬೆಲೆ ನಿಗದಿಪಡಿಸುತ್ತಿದ್ದು, ಬೆಲೆ ಏರಿಸುತ್ತಲೇ ಇದೆ. ಇದರ ಜೊತೆಗೆ ರಾಜ್ಯ ಸರ್ಕಾರವು ಹೆಚ್ಚುವರಿ ತೆರಿಗೆ ಹಾಕುವ ಮೂಲಕ ಜನರ ಹೊರೆಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು. ಎಲ್ಲ ರಾಜ್ಯಗಳಲ್ಲಿ ಏಕ ರೂಪ ತೆರಿಗೆ ವಿಧಿಸುವ ಮೂಲಕ ಬೆಲೆ ನಿಯಂತ್ರಣಕ್ಕೆ ತರಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಮುಖಂಡರಾದ ಜೆ.ಕೆ. ರವಿ, ವೀರೇಶ್, ಅರುಣ್‌, ರಾಜು, ಪ್ರಕಾಶ, ಪ್ರಶಾಂತ ಇದ್ದರು.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !