ಮಡಿಕೇರಿ: ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿ ಯನ್ನು ರದ್ದು ಮಾಡಿರುವುದನ್ನು ಹಾಗೂ ರಾಹುಲ್‌ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವು ದನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಪಿ.ಸಿ.ಹಸೈನಾರ್ ಹಾಜಿ, ‘ಅಲ್ಪಸಂಖ್ಯಾತ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ಕಸಿದುಕೊಳ್ಳುವ ಮೂಲಕ ಅನ್ಯಾಯ ಮಾಡಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
ಇಂದಿಗೂ ಮುಸ್ಲಿಮರು ಸಾಕಷ್ಟು ಹಿಂದುಳಿದಿದ್ದಾರೆ. ಯಾವುದೇ ತಜ್ಞರ ವರದಿ ಇಲ್ಲದೇ ಏಕಾಏಕಿ ಮೀಸಲಾತಿ ಯನ್ನು ರದ್ದುಗೊಳಿಸಿ ರುವುದು ತೀರಾ ಅವೈಜ್ಞಾನಿಕ. ಇದೊಂದು ವಿವೇಚನೆ ಇಲ್ಲದ ಕ್ರಮ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ‘ಮೀಸಲಾತಿಯಲ್ಲಿ ಈಗ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಮುಸ್ಲಿಮರ ಮೀಸಲಾತಿಯನ್ನು ಹಿಂದೆ ಇದ್ದಂತೆ ಉಳಿಸಬೇಕು’ ಎಂದು ಒತ್ತಾಯಿಸಿದರು.
ಕೆಪಿಸಿಸಿ ವಕ್ತಾರ ಟಿ.ಎಂ.ಶಾಹೀದ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಎಸ್.ಸಿ.ಘಟಕದ ಅಧ್ಯಕ್ಷ ಜಯೇಂದ್ರ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ, ಮುಖಂಡರಾದ ಪಿ.ಎಂ.ಖಾಸಿಂ, ಅಬ್ದುಲ್ ರೆಹಮಾನ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.