ವಿಜಯಪುರ: ಅನುದಾನ ರಹಿತ ಶಾಲಾ ಶಿಕ್ಷಕರ ಕಾಲ್ಪನಿಕ ವೇತನ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಸದಸ್ಯರು ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳನ್ನು ಬಂದ್ ಮಾಡಿ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಮೆರವಣಿಗೆ ಹೊರಟು ಗಾಂಧಿ ಚೌಕ್, ಬಸವೇಶ್ವರ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಕರು, ಶಿಕ್ಷಕಿಯರು ಪಾಲ್ಗೊಂಡಿದ್ದರು.

‘1995ರ ನಂತರದ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಅನುದಾನಿತ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಕಾಲ್ಪನಿಕ ವೇತನವನ್ನು ಹೆಚ್ಚಿಸಬೇಕು. ಬಡ್ತಿ ನಿಯಮ ಜಾರಿಗೊಳಿಸಬೇಕು. ಖಾಸಗಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಬಿಸಿಯೂಟ, ಹಾಲು, ಸಮವಸ್ತ್ರ, ಪಠ್ಯ ಪುಸ್ತಕ, ಸೈಕಲ್ ವಿತರಿಸಬೇಕು’ ಎಂದು ಒತ್ತಾಯಿಸಿದರು.

ಒಕ್ಕೂಟದ ಗೌರವ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಜಿಲ್ಲಾ ಕಾರ್ಯಾಧ್ಯಕ್ಷ ಸಂಗನಗೌಡ ಯಂಕಂಚಿ, ಜಿಲ್ಲಾ ಉಪಾಧ್ಯಕ್ಷ ಎಂ.ಆರ್.ತುಪ್ಪದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲೇಶಿ ಪವಾರ, ಸಹ ಕಾರ್ಯದರ್ಶಿ ಲಕ್ಷ್ಮಿಕಾಂತ ಮಾನೆ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.