ಸೋಮವಾರ, ಏಪ್ರಿಲ್ 6, 2020
19 °C

ವಿನೋಬನಗರ ರಸ್ತೆ ಕಾಮಗಾರಿ ವಿಳಂಬಕ್ಕೆ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕಾಮಗಾರಿ ವಿಳಂಬದ ಪರಿಣಾಮ ವಿನೋಬನಗರ 100 ಅಡಿ ರಸ್ತೆ ದೂಳುಮಯವಾಗಿದೆ. ಈ ಭಾಗದ ಜನರು ಶ್ವಾಸಕೋಶ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿ ನಾಗರಿಕರು ಶುಕ್ರವಾರ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

‘ಸ್ಮಾರ್ಟ್‌ಸಿಟಿ’ ಹೆಸರಿನಲ್ಲಿ ನಗರದ ಎಲ್ಲೆಡೆ ಕಾಮಗಾರಿಗಳು ನಡೆಯುತ್ತಿವೆ. ಅವೈಜ್ಞಾನಿಕ ಕಾಮಗಾರಿ ಪರಿಣಾಮ ಈ ಭಾಗದಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದೆ. ಶಿಕಾರಿಪುರ, ಹೊನ್ನಾಳಿ ಭಾಗದ ಬಸ್‌ಗಳು ಇದೇ ಮಾರ್ಗದಲ್ಲಿ ಸಾಗುತ್ತವೆ. ಇದರಿಂದಾಗಿ ವಾಹನ ಮತ್ತು ಜನಸಂಚಾರ ದಟ್ಟವಾಗಿದೆ. ಎಲ್ಲರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿದರು.

ಸುತ್ತಮುತ್ತಲ ಪ್ರದೇಶದಲ್ಲಿ ಅಂಗಡಿ ಮುಂಗಟ್ಟುಗಳು ಹೆಚ್ಚಾಗಿವೆ. ವ್ಯವಹಾರಕ್ಕೂ ತೊಂದರೆಯಾಗಿದೆ. ಏಕಮುಖ ಸಂಚಾರ ಅಪಘಾತಗಳಿಗೆ ಕಾರಣವಾಗಿದೆ. ಸುಮಾರು ಮೂರು ತಿಂಗಳಿನಿಂದ ಕಾಮಗಾರಿ ನಡೆಯುತ್ತಿದೆ. ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ನಿತ್ಯವೂ ಕಿರಿಕಿರಿಯಾಗುತ್ತಿದೆ ಎಂದು ದೂರಿದರು.

ಅಧಿಕಾರಿಗಳು ತಕ್ಷಣ ಕಾಮಗಾರಿ ಮುಗಿಸಬೇಕು. ಭಾರಿ ವಾಹನಗಳ ಸಂಚಾರಕ್ಕೆಬದಲಿ ಮಾರ್ಗ ಸೂಚಿಸಬೇಕು. ವಿನಾಕಾರಣ ವಿಳಂಬ ಮಾಡುತ್ತಿರುವ ಗುತ್ತಿಗೆದಾರನಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಹರೀಶ್, ಶರತ್, ಮೋಹನ್ ಕುಮಾರ್, ದೀಪಕ್, ಕುಮಾರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು