ಭಾನುವಾರ, ಡಿಸೆಂಬರ್ 8, 2019
21 °C

ಪಶುವೈದ್ಯೆ ಪ್ರಕರಣ: ಎನ್‌ಎಸ್‌ಯುಐ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಹೈದರಾಬಾದ್‌ನಲ್ಲಿ ಪಶು ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಘಟನೆ ಖಂಡಿಸಿ ಎನ್ಎಸ್‌ಯುಐ, ಗಂಧದಗುಡಿ ಫೌಂಡೇಶನ್ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ರಾಜಸ್ತಾನದ ಜೈಪುರದ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಎಗ್ಗಿಲ್ಲದೆ ನಡೆಯುತ್ತಿವೆ. ಮಹಿಳಾ ಸುರಕ್ಷತೆ ಇಲ್ಲವಾಗಿದೆ. ಇಂತಹ ಕಾಮಾಂಧರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ತೆಲಂಗಾಣ ಸರ್ಕಾರ ಇಂತಹ ನೀಚ ಕೃತ್ಯ ತಡೆಯುವಲ್ಲಿ ವಿಫಲವಾಗಿದೆ. ಮಹಿಳೆಯರಲ್ಲಿ ಅಸುರಕ್ಷತಾ ಭಾವ ಕಾಡುತ್ತಿದೆ. ಕಠಿಣ ನಿಯಮಗಳನ್ನು ಜಾರಿಗೆ ತರಬೇಕು. ವಿಶೇಷ ನ್ಯಾಯಾಲಯ ರಚಿಸಬೇಕು, ಕಾನೂನು ಸುವ್ಯವಸ್ಥೆ ಬಿಗಿಗೊಳಿಸಬೇಕು. ಮಹಿಳಾ ಭದ್ರತೆಗೆ ವಿಶೇಷ ಮಹಿಳಾ ತಂಡ ರಚಿಸಬೇಕು. ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಎನ್ಎಸ್‌ಐ ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಬಾಲಾಜಿ, ಟಿ.ವಿ.ವಿನಯ್, ವಿಜಯ್, ಆರ್.ರಘು, ಅರ್ಜುನ್‌, ಆಕಾಶ್‌, ಗಂಧದ ಗುಡಿ ಫೌಂಡೇಶನ್ ಅಧ್ಯಕ್ಷ ವೇಣುಗೋಪಾಲ್, ಉಪಾಧ್ಯಕ್ಷ ಕುಶಾಲ್, ಕಾರ್ಯದರ್ಶಿ ಆರ್.ಹೇಮಂತ್, ಬಿ.ವಿ.ಭರತ್, ಪ್ರಹ್ಲಾದ್, ಮಾರುತಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರತಿಕ್ರಿಯಿಸಿ (+)