ರಾಮನಗರ: ಮರ್ಯಾದಾ ಹತ್ಯೆ ಖಂಡಿಸಿ ಪ್ರತಿಭಟನೆ

7

ರಾಮನಗರ: ಮರ್ಯಾದಾ ಹತ್ಯೆ ಖಂಡಿಸಿ ಪ್ರತಿಭಟನೆ

Published:
Updated:

ರಾಮನಗರ: ಕನಕಪುರ ತಾಲ್ಲೂಕಿನಲ್ಲಿ ಈಚೆಗೆ ನಡೆದ ಮರ್ಯಾದಾ ಹತ್ಯೆ ಸೇರಿದಂತೆ ಸರಣಿ ಕೊಲೆಗಳನ್ನು ಖಂಡಿಸಿ ಬಹುಜನ ಸಮಾಜ ಪಕ್ಷದ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಐಜೂರು ವೃತ್ತದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಕಂದಾಯ ಭವನದ ಮುಂಭಾಗ ಸಮಾವೇಶಗೊಂಡರು. ದಲಿತರು, ಹಿಂದುಳಿದವರಿಗೆ ಸೂಕ್ತ ರಕ್ಷಣೆ ನೀಡುತ್ತಿಲ್ಲ ಎಂದು ಆರೋಪಿಸಿ ಪೊಲೀಸರ ವಿರುದ್ಧ ಘೋಷಣೆ ಕೂಗಿದರು. 

ಗ್ರಾಮೀಣ ಪ್ರದೇಶದಲ್ಲಿ ದಲಿತರ ಮೇಲಿನ ದೌರ್ಜನ್ಯ, ಅಸ್ಪೃಶ್ಯತೆ, ನಕಲಿ ಮದ್ಯ ಮಾರಾಟದಂತಹ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಇನ್ನಾದರೂ ಕಡಿವಾಣ ಹಾಕಿ ಎಂದು ಆಗ್ರಹಿಸಿದರು. 

ಬಿಎಸ್‌ಪಿ ರಾಜ್ಯ ಘಟಕದ ಉಪಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ಕಾರ್ಯದರ್ಶಿ ಮಲ್ಲಿಕಾರ್ಜುನ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !