‘ಅಂಗವಿಕಲರಿಗೆ ಆದ್ಯತೆ ಮೇಲೆ ಸರ್ಕಾರಿ ಸೌಲಭ್ಯ ಒದಗಿಸಿ’

7
ಅಂಗವಿಕಲರ ಸೌಲಭ್ಯಗಳ ಕುರಿತ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ

‘ಅಂಗವಿಕಲರಿಗೆ ಆದ್ಯತೆ ಮೇಲೆ ಸರ್ಕಾರಿ ಸೌಲಭ್ಯ ಒದಗಿಸಿ’

Published:
Updated:
Deccan Herald

ವಿಜಯಪುರ:  ‘ಅಂಗವಿಕಲ ಫಲಾನುಭವಿಗಳಿಗೆ ಶಿಕ್ಷಣ, ಉದ್ಯೋಗಾವಕಾಶ, ಆರೋಗ್ಯ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ಆದ್ಯತೆ ಮೇರೆಗೆ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ’ ಎಂದು ಅಂಗವಿಕಲರ ಅಧಿನಿಯಮದ ರಾಜ್ಯ ಆಯುಕ್ತ ವಿ.ಎಸ್.ಬಸವರಾಜು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಅಂಗವಿಕಲರ ಸೌಲಭ್ಯಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಸರ್ಕಾರ ಅಂಗವಿಕಲರ ಅನುಕೂಲಕ್ಕಾಗಿಯೇ 5% ಅನುದಾನವನ್ನು ಒದಗಿಸಿದ್ದು, ಈ ಅನುದಾನದಡಿ ಪ್ರತಿ ಇಲಾಖೆ, ಅಂಗವಿಕಲ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಆದ್ಯತೆ ಮೇಲೆ ಒದಗಿಸಬೇಕು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಾಮಾಜಿಕ ಭದ್ರತಾ ಯೋಜನೆಯಡಿ ಅರ್ಹ ಅಂಗವಿಕಲ ಫಲಾನುಭವಿಗಳಿಗೆ ಮಾಶಾಸನ ದೊರೆಯುತ್ತಿಲ್ಲ ಎಂಬುದು ಗಮನಕ್ಕೆ ಬಂದಿದ್ದು, ಈ ಕುರಿತಂತೆ ಸೂಕ್ತ ಪರಿಶೀಲನೆ ನಡೆಸಿ, ಯಾವುದೇ ರೀತಿಯ ಲೋಪವಿದ್ದಲ್ಲಿ ಸರಿಪಡಿಸಬೇಕು. ಅರ್ಹ ಫಲಾನುಭವಿಗಳಿಗೆ ಮಾತ್ರ ಮಾಶಾಸನ ದೊರೆಯುವಂತೆ ನೋಡಿಕೊಳ್ಳುವ ಮೂಲಕ ಸರ್ಕಾರದ ಮಾಶಾಸನ ಅನುದಾನ ದುರುಪಯೋಗವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಜಿಲ್ಲಾ ಕೈಗಾರಿಕಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿಗಮ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಹಾಗೂ ವಿವಿಧ ಅಂಗವಿಕಲ ಫಲಾನುಭವಿಗಳಿಂದ ಕುಂದು-ಕೊರತೆ ಅರ್ಜಿಗಳನ್ನು ಸ್ವೀಕರಿಸಿ ವಿಚಾರಣೆ ನಡೆಸಲಾಯಿತು.

ಅಂಗವಿಕಲ ಅಧಿನಿಯಮದ ಉಪ ಆಯುಕ್ತ ಪದ್ಮನಾಭ, ಉಪ ನಿರ್ದೇಶಕ ಶಿವಾ ಹಿರೇಮಠ, ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಸುಂದರೇಶಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅಶೋಕ ಕೆಲವೆಡೆ, ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ವಿ.ಜಿ.ಉಪಾಧ್ಯೆ ಉಪಸ್ಥಿತರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !