ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಹೂವು ಬೆಳೆಗಾರರಿಗೆ ಪರಿಹಾರ ಒದಗಿಸಿ: ಡಿಸಿ ವೈ.ಎಸ್. ಪಾಟೀಲ್

Last Updated 13 ಮೇ 2020, 15:16 IST
ಅಕ್ಷರ ಗಾತ್ರ

ವಿಜಯಪುರ: ಹೂವು ಬೆಳೆಗಾರರು ಲಾಕ್‌ಡೌನ್‌ನಿಂದ ತೀವ್ರ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪ್ರತಿ ಹೆಕ್ಟೆರ್‌ಗೆ ₹ 25 ಸಾವಿರ ಪರಿಹಾರವನ್ನು ಘೋಷಿಸಿದ್ದು, ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಈ ಸೌಲಭ್ಯ ದೊರಕಿಸಿಕೊಡುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ತೋಟಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.

ಹೂವು ಬೆಳೆ ನಷ್ಟದ ಸರ್ವೆ ಪ್ರಕಾರ ಜಿಲ್ಲೆಯ ಸುಮಾರು 249 ಹೂವು ಬೆಳೆಗಾರರು ತೀವ್ರ ನಷ್ಟವನ್ನು ಅನುಭವಿಸಿದ್ದಾರೆ. ಇಂತಹ ಬೆಳೆಗಾರರಿಗೆ ಪಟ್ಟಿಯನ್ನು ಆಯಾ ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯ್ತಿ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು.ಪಟ್ಟಿಯಿಂದ ಕೈಬಿಟ್ಟು ಹೋಗಿದ್ದಲ್ಲಿ ಅಂತವರು ಆಯಾ ತಾಲ್ಲೂಕು ತೋಟಗಾರಿಕಾ ಕಚೇರಿಗೆ ಮಾಹಿತಿ ನೀಡಬಹುದಾಗಿದ್ದು, ಅಧಿಕಾರಿಗಳು ಕೂಡ ಸೂಕ್ತ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಮಾರ್ಚ್‌ 13ರಿಂದ ಮೇ 17ರ ಅವಧಿಯಲ್ಲಿ ನಷ್ಟ ಅನುಭವಿಸಿದ ರೈತರಿಗೆ ಬೆಳೆ ಪರಿಹಾರ ನೀಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ ಗೋವಿಂದ ರೆಡ್ಡಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಂತೋಷ ಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT