ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PSI Recruitment Scam | ಸಹಾಯಕ ಪ್ರಾಧ್ಯಾಪಕ ಬಂಧನ

Last Updated 18 ಫೆಬ್ರುವರಿ 2023, 16:58 IST
ಅಕ್ಷರ ಗಾತ್ರ

ಕಲಬುರಗಿ: ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಯೊಬ್ಬರಿಗೆ ಬ್ಲೂಟೂತ್ ಉಪಕರಣ ಪೂರೈಸಿದ ಆರೋಪದ ಮೇಲೆ ಸಿಐಡಿ ಪೊಲೀಸರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ (ಸ್ವಾಯತ್ತ) ಸಹಾಯಕ ಪ್ರಾಧ್ಯಾಪಕ ವಿಜಯಕುಮಾರ್ ಹೆಬ್ಬಾಳ್ಕರ್ ಎಂಬುವರನ್ನು ಶನಿವಾರ ಬಂಧಿಸಿದ್ದಾರೆ.

‘ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಆಯ್ಕೆಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಸುಪ್ರಿಯಾ ಎಂಬುವರಿಗೆ ಬ್ಲೂಟೂತ್ ಪೂರೈಸಲು ಪ್ರಕರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಸೂಚಿಸಿದ್ದ. ಅದರಂತೆ ಕಳೆದ ವರ್ಷದ ಅಕ್ಟೋಬರ್ 2ರಂದು ರಾತ್ರಿ ಸರ್ಕಾರಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಆರೋಪಿಯ ಬೆಂಚಿನ ಕೆಳಗಡೆ ಬ್ಲೂಟೂತ್ ಇರಿಸಿದ್ದ. ಇದಕ್ಕಾಗಿ ಪಾಟೀಲ ಕಡೆಯಿಂದ ಹಣ ಪಡೆದಿದ್ದ ಎಂದು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ’ ಎಂದು ಮೂಲಗಳು ತಿಳಿಸಿವೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಚಿಂಚೋಳಿ ತಾಲ್ಲೂಕಿನ ನಾವದಗಿ ಗ್ರಾಮದ ವಿಜಯಕುಮಾರ್ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ನೇಮಕಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT