ಬುಧವಾರ, ಆಗಸ್ಟ್ 5, 2020
24 °C

ರಾಯಚೂರು | ಮತ್ತೆ 109 ಜನರಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ನಾಗಾಲೋಟದಲ್ಲಿ ಮುಂದುವರಿದಿದ್ದು ಮತ್ತೆ 109 ಜನರಿಗೆ ಕೋವಿಡ್‌ ದೃಢವಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 885 ಕ್ಕೆ ಏರಿಕೆ ಆಗಿದೆ. ಇದುವರೆಗೂ ಒಟ್ಟು 2,381 ಜನರಿಗೆ ಸೋಂಕು ತಗುಲಿದಂತಾಗಿದೆ. ಸೋಂಕಿನಿಂದ ಗುಣಮುಖವಾಗಿರುವ 67 ಜನರನ್ನು ಶನಿವಾರ ಬಿಡುಗಡೆ ಮಾಡಿದ್ದು, ಇದುವರೆಗೂ ಒಟ್ಟು1,471 ಜನರು ಗುಣಮುಖ ಆಗಿದ್ದಾರೆ.

ಸೋಂಕಿತರನ್ನು ಆಯಾ ತಾಲ್ಲೂಕು ಕೇಂದ್ರಗಳ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಇರಿಸಲಾಗಿದೆ. ಉಸಿರಾಟ ಸಮಸ್ಯೆ ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದ ಆರು ಜನರನ್ನು ಓಪೆಕ್‌ಗೆ ದಾಖಲಿಸಲಾಗಿದೆ. ಸದ್ಯ 107 ಜನರು ಆಸ್ಪತ್ರೆಯಲ್ಲಿದ್ದಾರೆ.

ಶನಿವಾರ ಮತ್ತೆ 169 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, 225 ಮಾದರಿಗಳ ವರದಿ ಬರಬೇಕಿದೆ. ಇದುವರೆಗೂ 25 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.