ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಎ. 4ನೇ ಸೆಮಿಸ್ಟರ್‌ ಪರೀಕ್ಷಾ ನಕಲು: 14 ವಿದ್ಯಾರ್ಥಿಗಳು ಡಿಬಾರ್‌

Last Updated 15 ಮೇ 2019, 14:16 IST
ಅಕ್ಷರ ಗಾತ್ರ

ರಾಯಚೂರು: ತಾಲ್ಲೂಕಿನ ಶಕ್ತಿನಗರದ ಶ್ರೀ ಚನ್ನಪ್ಪ ಪದವಿ ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ 14 ವಿದ್ಯಾರ್ಥಿಗಳನ್ನು ಪರೀಕ್ಷಾ ಜಾಗೃತದಳದವರು ಬುಧವಾರ ಡಿಬಾರ್‌ ಮಾಡಿದ್ದಾರೆ.

ಬಿ.ಎ. 4ನೇ ಸೆಮಿಸ್ಟರ್‌ನ ರಾಜ್ಯಶಾಸ್ತ್ರ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿರುವುದು ಪತ್ತೆಯಾಗಿದೆ. ಪದವಿ ಪರೀಕ್ಷೆಗಳು ಆರಂಭವಾದ ಬಳಿಕ ಒಟ್ಟು ಇವರೆಗೂ ಸುಮಾರು 75 ವಿದ್ಯಾರ್ಥಿಗಳನ್ನು ಡಿಬಾರ್‌ ಮಾಡಲಾಗಿದೆ.

‘ಪರೀಕ್ಷೆಯಲ್ಲಿ ನಕಲು ಮಾಡುವ ಪ್ರವೃತ್ತಿ ಕಂಡು ಬರುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಪಾಲಕರು ಈ ಬಗ್ಗೆ ಎಚ್ಚರಿಕೆ ವಹಿಸುವುದು ತುಂಬಾ ಅಗತ್ಯವಿದೆ’ ಎಂದು ಜಾಗೃತ ದಳದ ಅಧ್ಯಕ್ಷ ಪ್ರಾಣೇಶ ಕುಲಕರ್ಣಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT