ಸೋಮವಾರ, ಸೆಪ್ಟೆಂಬರ್ 28, 2020
21 °C

ರಾಯಚೂರು: ಜಿಲ್ಲೆಯಲ್ಲಿ ಮತ್ತೆ 142 ಜನರಿಗೆ ಕೋವಿಡ್‌ ದೃಢ

‍ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಮತ್ತೆ 142 ಜನರಿಗೆ ಕೋವಿಡ್‌ ದೃಢವಾಗಿದೆ. ಇದೇ ವೇಳೆ, ಕೋವಿಡ್‌ನಿಂದ ಗುಣಮುಖರಾಗಿದ್ದ 116 ಜನರನ್ನು ಬಿಡುಗಡೆ ಮಾಡಲಾಗಿದೆ. ಸದ್ಯ 939 ಸಕ್ರಿಯ ಪ್ರಕರಣಗಳಿವೆ.

ಇದುವರೆಗೂ ಒಟ್ಟು 2,850 ಸೋಂಕಿತರು ಪತ್ತೆಯಾಗಿದ್ದಾರೆ. ಅದರಲ್ಲಿ ಗುಣರಾದವರು ಒಟ್ಟು 1,881 ಜನರು. ಕೋವಿಡ್‌ನಿಂದ ಮತ್ತೆ ಇಬ್ಬರು ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 30 ಕ್ಕೆ ಏರಿಕೆಯಾಗಿದೆ.

ಗಂಭೀರ ಸ್ಥಿತಿಯಲ್ಲಿದ್ದ ಐದು ಜನರನ್ನು ಒಪೆಕ್‌ಗೆ ದಾಖಲಿಸಲಾಗಿದ್ದು, ಒಟ್ಟು 129 ಜನರು ಆಸ್ಪತ್ರೆಯಲ್ಲಿದ್ದಾರೆ. ಒಟ್ಟು 349 ಮಾದರಿಗಳ ವರದಿ ಬರಬೇಕಿದೆ. ಇದುವರೆಗೂ ಒಟ್ಟು 41,655 ಜನರಿಂದ ಗಂಟಲು ದ್ರವ ಸಂಗ್ರಹಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು