ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1,500 ಗ್ರಾಮ ಲೆಕ್ಕಾಧಿಕಾರಿ ನೇಮಕ

ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ
Published 16 ಜನವರಿ 2024, 15:37 IST
Last Updated 16 ಜನವರಿ 2024, 15:37 IST
ಅಕ್ಷರ ಗಾತ್ರ

ರಾಯಚೂರು: ‘ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 1,500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

‘ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡು, ಫೆಬ್ರುವರಿಯಲ್ಲಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು’ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘357 ಸರ್ವೆಯರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ 590 ಹುದ್ದೆಗಳ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮತಿ ಪಡೆಯಲಾಗುವುದು’ ಎಂದರು.

‘ನೇಮಕಾತಿಯಾದ 750 ಸರ್ವೆಯರ್‌ಗಳಿಗೆ ತರಬೇತಿ ಕೊಡಲಾಗಿದೆ. ಅವರೂ ಕಾರ್ಯಾರಂಭ ಮಾಡಲಿದ್ದಾರೆ. ಇದರಿಂದ ಕಂದಾಯ ಜಮೀನುಗಳ ಸಮೀಕ್ಷೆ ಕಾರ್ಯ ಸುಲಭವಾಗಲಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT