ಸೋಮವಾರ, ಅಕ್ಟೋಬರ್ 26, 2020
28 °C

ರಾಯಚೂರು ಜಿಲ್ಲೆಯಲ್ಲಿ 162 ಕೋವಿಡ್ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಭಾನುವಾರ 162 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದೂವರೆಗೆ 11,925 ಕೊರೊನಾ ಸೋಂಕು ವರದಿಯಾಗಿದೆ. ಇದೇ ವೇಳೆ 197 ಜನರು ಸೇರಿದಂತೆ ಒಟ್ಟು 10,224 ಜನರು ಸಂಪೂರ್ಣ ಗುಣಮುಖರಾಗಿದ್ದಾರೆ.

ಜಿಲ್ಲೆಯಿಂದ ಒಟ್ಟು 1067 ಜನರ ಮಾದರಿಯನ್ನು ಕೋವಿಡ್ ಶಂಕೆ ಹಿನ್ನಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಹಿಂದೆ ಕಳುಹಿಸಲಾಗಿದ್ದ ಫಲಿತಾಂಶಗಳಲ್ಲಿ 1,567 ನೆಗೆಟಿವ್ ಆಗಿವೆ. ಇದುವರೆಗೆ ಒಟ್ಟು 1,22,593 ಜನರ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು ಈ ಪೈಕಿ 1,08,744 ವರದಿಗಳು ನೆಗೆಟಿವ್ ಆಗಿವೆ. ಉಳಿದ 857 ಸ್ಯಾಂಪಲ್‍ಗಳ ಫಲಿತಾಂಶ ಇನ್ನೂ ಬರಬೇಕಿದೆ.

ಫಿವರ್ ಕ್ಲಿನಿಕ್‍ಗಳಲ್ಲಿ 516 ಜನರನ್ನು ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 18 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್‍ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.