ಲಿಂಗಸುಗೂರು: ಕಲುಷಿತ ಆಹಾರ ಸೇವನೆಯೇ ತಾಲ್ಲೂಕಿನ ಗದ್ಲರತಾಂಡಾ ನಿವಾಸಿಗಳಲ್ಲಿ ವಾಂತಿ ಭೇದಿ ಕಾಣಿಸಿಕೊಳ್ಳಲು ಕಾರಣ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ತಾಂಡಾದಲ್ಲಿ ದೇವರ ಹೆಸರಲ್ಲಿ ಬುಧವಾರ ಬಾಡೂಟ ಸಿದ್ಧಪಡಿಸಲಾಗಿತ್ತು. ಇದನ್ನು ಸೇವಿಸಿದ್ದ 20 ಮಂದಿ ವಾಂತಿಭೇಧಿಯಿಂದ ಬಳಲಿದ್ದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ಡಾ. ವಿಕ್ರಮ ಪಾಟೀಲ, ಡಾ. ಅಭಿಜಿತ್ ನಾಯಕ ಹಾಗೂ ಸಿಬ್ಬಂದಿ ಗ್ರಾಮಕ್ಕೆ ಭೇಟಿ ಪರಿಶೀಲಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಪಾಟೀಲ ಮಾಕಾಪುರ ಮಾತನಾಡಿ, 'ತಾಂಡಾಕ್ಕೆ ವೈದ್ಕಕೀಯ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದೆ. ಕಲಷಿತ ಆಹಾರ ಸೇವನೆಯಿಂದಾಗಿ ವಾಂತಿ ಕಾಣಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆಹಾರ ಮಾದರಿ ಪಡೆದು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದೆ’ ಎಂದು ತಿಳಿಸಿದರು.

ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ ಕುಲಕರ್ಣಿ, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಕಾಶ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.