ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು | ಪಾನಿಪುರಿ ಸೇವಿಸಿ 20 ವಿದ್ಯಾರ್ಥಿನಿಯರು ಅಸ್ವಸ್ಥ

Published 6 ಜೂನ್ 2024, 15:56 IST
Last Updated 6 ಜೂನ್ 2024, 15:56 IST
ಅಕ್ಷರ ಗಾತ್ರ

ರಾಯಚೂರು: ಇಲ್ಲಿಯ ಕೃಷಿ ವಿಜ್ಷಾನಗಳ ವಿಶ್ವವಿದ್ಯಾಲಯದ 20 ವಿದ್ಯಾರ್ಥಿನಿಯರು ಪಾನಿಪುರಿ ಸೇವಿಸಿ ಅಸ್ವಸ್ಥಗೊಂಡಿದ್ದಾರೆ.

ಬುಧವಾರ ಸಂಜೆ ವಿಶ್ವವಿದ್ಯಾಲಯದ ಮುಂಭಾಗದ ರಸ್ತೆ ಬದಿಯಲ್ಲಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯಿಂದ 20 ವಿದ್ಯಾರ್ಥಿನಿಯರು ಪಾನಿಪುರಿ, ಕೆಲವರು ಅಮ್ಲೇಟ್‌ ಸೇವಿಸಿದ್ದರು. ರಾತ್ರಿ ವಾಂತಿಬೇಧಿ ಕಾಣಿಸಿಕೊಂಡು ಅಸ್ವಸ್ಥರಾಗಿ ತಕ್ಷಣ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

18 ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರ ವಿದ್ಯಾರ್ಥಿನಿಯರ ಆರೋಗ್ಯವೂ ಸುಧಾರಿಸಿದೆ.

‘ಪಾನಿಪುರಿ, ಆಮ್ಲೇಟ್‌ ಸೇವಿಸಿದ ಕೆಲ ವಿದ್ಯಾರ್ಥಿಗಳ ಹೊಟ್ಟೆ ತೊಳೆಸಿದಂತಾಗಿದೆ. ಎಲ್ಲರೂ ಚಿಕಿತ್ಸೆ ಪಡೆದುಕೊಂಡಿದ್ದು, ಆರೋಗ್ಯವಾಗಿದ್ದಾರೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ವೀರನಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT