ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

Published 14 ಜೂನ್ 2024, 13:38 IST
Last Updated 14 ಜೂನ್ 2024, 13:38 IST
ಅಕ್ಷರ ಗಾತ್ರ

ರಾಯಚೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್‌ ಪೊಸ್ಕೊ ನ್ಯಾಯಾಲಯ ಶುಕ್ರವಾರ 20ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.

2021ರ ಜನವರಿಯಲ್ಲಿ ಲಿಂಗಸುಗೂರು ತಾಲ್ಲೂಕಿನ ನೀರಲಕೇರಿ ಗ್ರಾಮದ ಆರೋಪಿ ಹುಲ್ಲಪ್ಪ ರಾಮಣ್ಣಗೆ (25) ಕಠಿಣ ಶಿಕ್ಷೆ ಹಾಗೂ ₹15 ಸಾವಿರ ದಂಡ ವಿಧಿಸಿ ನ್ಯಾಯಾಧೀಶ ಬಿ.ಬಿ. ಜಕಾತಿ ತೀರ್ಪು ನೀಡಿದ್ದಾರೆ. ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ ₹ 9 ಲಕ್ಷ ಪರಿಹಾರ ಕೊಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಲಿಂಗಸುಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಾಲಾಗಿತ್ತು. ಸಿಪಿಐ ಮಹಾಂತೇಶ ಸಜ್ಜನ ಅವರು ಆರೋಪಿ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯವು 20 ಸಾಕ್ಷಿಗಳ ಪೈಕಿ 17 ಸಾಕ್ಷಿದಾರರ ವಿಚಾರಣೆ ನಡೆಸಿತ್ತು. ಕಾನ್‌ಸ್ಟೆಬಲ್‌ಗಳಾದ ಬಸವರಾಜ, ಮಲ್ಲಪ್ಪ ಪೂಜಾರಿ ಮತ್ತು ವೀರೇಶ ತನಿಖೆಯಲ್ಲಿ ಸಹಕರಿಸಿದ್ದರು.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಂ. ಮಂಜುನಾಥ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT