ಭಾನುವಾರ, ಆಗಸ್ಟ್ 1, 2021
23 °C
ಪ್ರತಿದಿನ 100 ಜನರ ಗಂಟಲು ದ್ರವ ಮಾದರಿ ಸಂಗ್ರಹ: ಡಾ.ಮೌನೇಶ

ಮಸ್ಕಿ: 23 ಜನಕ್ಕೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಸ್ಕಿ: ಪಟ್ಟಣದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಜನ ಆತಂಕಗೊಂಡಿದ್ದಾರೆ.

ಪಟ್ಟಣದಲ್ಲಿ ಭಾನುವಾರ 23 ಜನರಿಗೆ ಕೋವಿಡ್‌ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ.

ಎರಡು ದಿನಗಳಲ್ಲಿ ಸೋಂಕಿತರ ಸಂಖ್ಯೆ 40 ರ ಗಡಿ ದಾಟಿದೆ. ಕೊರೊನಾ ಸೋಂಕಿನಿಂದ ಪಟ್ಟಣದ ವ್ಯಕ್ತಿಯೊಬ್ಬರು ಬಳ್ಳಾರಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

‘ಕೊರೊನಾ ಸೋಂಕಿತರನ್ನು ಹೋಂ ಐಸೋಲೇಷನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಮನೆಗಳಿಗೆ ಪುರಸಭೆ ವತಿಯಿಂದ ಸಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ’ ಎಂದು ಡಾ.ಮೌನೇಶ ತಿಳಿಸಿದ್ದಾರೆ.

‘ಪಟ್ಟಣದಲ್ಲಿ ಸೋಂಕಿತರ ಪತ್ತೆ ಕಾರ್ಯ ನಡೆದಿದೆ. ಪ್ರತಿದಿನ 70 ರಿಂದ 100 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳಿಸಿಕೊಡಲಾಗುತ್ತಿದೆ. ಇನ್ನು ಮುಂದೆ ಪ್ರತಿದಿನ 200 ಜನರನ್ನು ಪರೀಕ್ಷೆಗೊಳಪಡಿಸುವ ಗುರಿ ಹೊಂದಲಾಗಿದೆ’ ಎಂದು ಡಾ. ಮೌನೇಶ ತಿಳಿಸಿದ್ದಾರೆ.

‘ಕೊರೊನಾ ನಿಯಂತ್ರಣಕ್ಕೆ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದೆ. ಸಾರ್ವಜನಿಕರು ಮನೆಬಿಟ್ಟು ಹೊರ ಬರಬಾರದು’ ಎಂದು ಸಬ್‌ ಇನ್‌ಸ್ಪೆಕ್ಟರ್‌ ಸಿದ್ದರಾಮಪ್ಪ ಮನವಿ ಮಾಡಿದ್ದಾರೆ.

‘ನಿಯಮ ಉಲ್ಲಂಘಿಸಿ ಹೊರ ಬಂದರೆ ಅಂತವರ ಬೈಕ್ ಜಪ್ತಿ ಮಾಡುವ ಮೂಲಕ ಪ್ರಕರಣ ದಾಖಲಿಸಲಾಗುವುದು’ ಎಂದು ಎಚ್ಚರಿಸಿದ್ದಾರೆ.

ವಾರಾಂತ್ಯ ಕರ್ಫ್ಯೂ ಇದ್ದ ಕಾರಣ ಸಂತೆ ಮಾರುಕಟ್ಟೆಯಲ್ಲಿ ಅಂಗಡಿಗಳನ್ನು ತೆರೆಯದಂತೆ ಪುರಸಭೆ ಸಿಬ್ಬಂದಿ ನೋಡಿಕೊಂಡರು. ತೆರೆದಿದ್ದ ಕೆಲವೊಂದು ಅಂಗಡಿಗಳನ್ನು ಬಂದ್ ಮಾಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು