ಭಾನುವಾರ, ಜುಲೈ 25, 2021
25 °C

ರಾಯಚೂರಿನಲ್ಲಿ 26 ಜನರಿಗೆ ಕೋವಿಡ್‌ ದೃಢ: ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ರಾಯಚೂರು: ಜಿಲ್ಲೆಯಲ್ಲಿ ಬುಧವಾರ ಮತ್ತೆ 26 ಜನರಿಗೆ ಕೋವಿಡ್ ದೃಢವಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 814 ಜನರಿಗೆ ತಗುಲಿದಂತಾಗಿದೆ.

ಕೋವಿಡ್‌ನಿಂದ ಗುಣಮುಖರಾಗಿದ್ದ ಎಂಟು ಜನರನ್ನು ಬಿಡುಗಡೆ ಮಾಡಲಾಗಿದ್ದು, ಚಿಕಿತ್ಸೆ ಪಡೆದು ಇದುವರೆಗೂ ಒಟ್ಟು 484 ಜನರು ಬಿಡುಗಡೆಯಾದ್ದಾರೆ. ಆಸ್ಪತ್ರೆಯಲ್ಲಿ ಸದ್ಯಕ್ಕೆ 318 ಜನರು ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಪ್ರಕರಣ ಸಂಖ್ಯೆ ಪಿ-37080 ಹಾಗೂ ಪ್ರಕರಣ ಸಂಖ್ಯೆ ಪಿ-35516 ಇಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.

ಮತ್ತೆ 486 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಒಟ್ಟು 3,316 ಮಾದರಿಗಳ ವರದಿಗಳನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 135 ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು