ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: 26 ವೆಂಟಿಲೇಟರ್‌ ಕಳಪೆ

Last Updated 28 ಮೇ 2021, 21:58 IST
ಅಕ್ಷರ ಗಾತ್ರ

ರಾಯಚೂರು: ಕರ್ನಾಟಕ ರಾಜ್ಯ ಔಷಧಿ ಸರಬರಾಜು ನಿಗಮ (ಕೆಆರ್‌ಎಂಎಸ್‌ಎಲ್‌) ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್‌)ಗೆ ಪೂರೈಸಿದ್ದ ಅಗ್ವಾಮೇಕ್‌ ಕಂಪನಿಯ 26 ವೆಂಟಿಲೇಟರ್‌ಗಳು ಕಳಪೆ ಗುಣಮಟ್ಟದ್ದಾಗಿವೆ.

ಅವುಗಳನ್ನು ಹಿಂತಿರುಗಿಸಲು ರಿಮ್ಸ್‌ ಆಡಳಿತ ಮಂಡಳಿ ನಿರ್ಧರಿಸಿದೆ. ವೆಂಟಿಲೇಟರ್‌ ಖರೀದಿ ಮೊತ್ತವನ್ನು ಈಗಾಗಲೇ ರಿಮ್ಸ್‌ ಪಾವತಿಸಿದೆ. ಯಂತ್ರಗಳ ವಾಪಸಾತಿಗೆ ಸಂಬಂಧಿಸಿ ರಿಮ್ಸ್‌ ನಿರ್ದೇಶಕರು ಜಿಲ್ಲಾಧಿಕಾರಿಗೆ ಪತ್ರವೊಂದನ್ನು ನೀಡಿದ್ದಾರೆ.

ಕೋವಿಡ್‌ನಿಂದ ಬಳಲುತ್ತಿರುವವರ ಜೀವ ಉಳಿಸಲು ವೆಂಟಿಲೇಟರ್‌ಗಳ ಅಗತ್ಯವಿದೆ. ಈ ಬಗ್ಗೆ ಪ್ರತಿಕ್ರಿಯೆಗಾಗಿ ಜಿಲ್ಲಾಧಿಕಾರಿ ಮತ್ತು ರಿಮ್ಸ್‌ ನಿರ್ದೇಶಕರಿಗೆ ಕರೆ ಮಾಡಿದರೂ ಸ್ಪಂದನೆ ಸಿಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT