ಕೋವಿಡ್: ರಾಯಚೂರು ಜಿಲ್ಲೆಯಲ್ಲಿ ಮತ್ತೆ 216 ಜನರಿಗೆ ಸೋಂಕು ದೃಢ, ಮೂರು ಸಾವು

ರಾಯಚೂರು: ಜಿಲ್ಲೆಯಲ್ಲಿ ಬುಧವಾರ ಮತ್ತೆ 216 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಇದೂವರೆಗೆ 8,792 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.
176 ಸೇರಿದಂತೆ ಇದೂವರೆಗೆ ಒಟ್ಟು 6,914 ಜನರು ಕೋವಿಡ್ ನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯ ದೇವದುರ್ಗ ತಾಲ್ಲೂಕಿನಿಂದ 31, ಲಿಂಗಸೂಗೂರು 45, ಮಾನ್ವಿ 36, ಸಿಂಧನೂರು 52, ಮತ್ತು ರಾಯಚೂರು ತಾಲ್ಲೂಕಿನಿಂದ 49 ಸೇರಿದಂತೆ ಒಟ್ಟು 213 ಜನರ ಮಾದರಿಯನ್ನು ಕೋವಿಡ್ ಶಂಕೆ ಹಿನ್ನಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಬುಧವಾರ ಕಳುಹಿಸಲಾಗಿದೆ.
ಈ ಹಿಂದೆ ಕಳುಹಿಸಲಾಗಿದ್ದ ಬರದಿಯಲ್ಲಿ 1,732 ನೆಗೆಟಿವ್ ಆಗಿವೆ. ಒಟ್ಟಾರೆ ಜಿಲ್ಲೆಯಿಂದ ಇದೂವರೆಗೆ 89,994 ಜನರ ಮಾದರಿಯನ್ನು ಕೊರೋನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು,ಈಪೈಕಿ 80,533 ವರದಿಗಳು ನೆಗೆಟಿವ್ ಆಗಿವೆ. ಉಳಿದ 456 ಸ್ಯಾಂಪಲ್‌ಗಳ ಫಲಿತಾಂಶ ಇನ್ನೂ ಬರಬೇಕಿದೆ.
ಜಿಲ್ಲೆಯಲ್ಲಿ ಒಟ್ಟು 350 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.