ಲಿಂಗಸುಗೂರು ಸಮೀಪದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲಾಯಿತು
ಲಿಂಗಸುಗೂರು: ಸಮೀಪದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾನುವಾರ 45,600 ಕ್ಯೂಸೆಕ್ ನೀರು ಹರಿಸಲಾಯಿತು.
ADVERTISEMENT
ADVERTISEMENT
ಜಲಾಶಯಕ್ಕೆ 35 ಸಾವಿರ ಕ್ಯೂಸೆಕ್ ಒಳಹರಿವು ಇದೆ. ಜಲಾಶಯದ 12 ಕ್ರಸ್ಟ್ ಗೇಟ್‌ಗಳ ಮೂಲಕ 45,600 ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. 33 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 27.25 ಟಿಎಂಸಿ ಸಂಗ್ರಹವಿದೆ ಎಂದು ಜಲಾಶಯದ ಮೂಲಗಳು ತಿಳಿಸಿವೆ.