ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | 4,729 ಸ್ಯಾಂಪಲ್‌ ವರದಿಗಳು ಬರಬೇಕಿದೆ

Last Updated 27 ಮೇ 2020, 16:44 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಇದೂವರೆಗೆ 13,411 ಜನರ ಗಂಟಲಿನ ದ್ರವ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ 8,611 ವರದಿಗಳು ನೆಗೆಟಿವ್ ಆಗಿವೆ. ಇನ್ನುಳಿದ 4,729 ಸ್ಯಾಂಪಲ್‌ಗಳ ವರದಿ ಬರಬೇಕಿದೆ.

ದೇವದುರ್ಗ ತಾಲ್ಲೂಕಿನಿಂದ 163, ಲಿಂಗಸೂಗೂರು ತಾಲ್ಲೂಕಿನಿಂದ 48, ಮಾನ್ವಿ ತಾಲ್ಲೂಕಿನಿಂದ 34, ಸಿಂಧನೂರು ತಾಲ್ಲೂಕಿನಿಂದ 16 ಮತ್ತು ರಾಯಚೂರು ತಾಲ್ಲೂಕಿನಿಂದ 614 ಒಟ್ಟು 875 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಬುಧವಾರ ಕಳುಹಿಸಲಾಗಿದೆ. ಬುಧವಾರ ದೊರೆತ 743 ವರದಿಗಳಲ್ಲಿ ಐದು ಪಾಸಿಟಿವ್‌ ಪ್ರಕರಣಗಳಿವೆ.

ಕ್ವಾರಂಟೈನ್‌ ಕೇಂದ್ರ: ಜಿಲ್ಲೆಯಲ್ಲಿ ವಿವಿಧ ಕ್ವಾರಂಟೈನ್‌ ಕೇಂದ್ರಗಳಲ್ಲಿ ಒಟ್ಟು 9,538 ಜನರನ್ನು ಇರಿಸಲಾಗಿದೆ. ರಾಯಚೂರು ತಾಲ್ಲೂಕಿನ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 4,480 ಸಿಂಧನೂರು ತಾಲ್ಲೂಕಿನ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 489, ಮಾನ್ವಿ ತಾಲ್ಲೂಕಿನ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 1,534, ದೇವದುರ್ಗ ತಾಲ್ಲೂಕಿನ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 2,011 ಹಾಗೂ ಲಿಂಗಸೂಗೂರು ತಾಲ್ಲೂಕಿನ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 1,024 ಜನರು ಇದ್ದಾರೆ. ಸಾಂಸ್ಥಿಕ ಕ್ವಾರೆಂಟೈನ್‌ಗೆ ಬುಧವಾರ ಹೊಸದಾಗಿ 140 ಜನರನ್ನು ದಾಖಲಿಸಲಾಗಿದೆ. ಇದೇ ವೇಳೆ, 682 ಜನರನ್ನು ಬಿಡುಗಡೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT