ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಅಕ್ಷರ ದಾಸೋಹ ಅಧಿಕಾರಿ, ಮುಖ್ಯ ಶಿಕ್ಷಕ ಅಮಾನತು

Published 5 ಜುಲೈ 2023, 4:52 IST
Last Updated 5 ಜುಲೈ 2023, 4:52 IST
ಅಕ್ಷರ ಗಾತ್ರ

ರಾಯಚೂರು: ತಾಲ್ಲೂಕಿನ ಅಪ್ಪನದೊಡ್ಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 49 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಅಕ್ಷರ ದಾಸೋಹ ಯೋಜನೆ ತಾಲ್ಲೂಕು ಸಹಾಯಕ ನಿರ್ದೇಶಕಿ ಹಾಗೂ ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಜುಲೈ 1ರಂದು ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು.

ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಘಟನೆಯಿಂದಾಗಿ ಪಾಲಕರು ತೀವ್ರ ಆತಂಕಕ್ಕೀಡಾಗಿದ್ದರು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ, ನಿರ್ಲಕ್ಷ್ಯ ತೋರಿದ ಅಕ್ಷರ ದಾಸೋಹ ಯೋಜನೆಯ ತಾಲ್ಲೂಕು ಸಹಾಯಕ ನಿರ್ದೇಶಕಿ ಮಂಜುಳಾ ಮತ್ತು ಮುಖ್ಯ ಶಿಕ್ಷಕ ಕನಕಪ್ಪ ಅವರನ್ನು ಅಮಾನತುಗೊಳಿಸಿದೆ.

ಘಟನೆ ಸಂಬಂಧ ತನಿಖೆ ನಡೆಸುವಂತೆ ಸಚಿವರು, ಶಾಸಕರು ಸೂಚನೆ ನೀಡಿದ್ದರು. ಅದರಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತನಿಖೆ ನಡೆಸಿ ವರದಿಯನ್ನು ನೀಡಿದ್ದು, ಅದನ್ನು ಆಧರಿಸಿ ಜಿಲ್ಲಾಡಳಿತ ಇಬ್ಬರ ವಿರುದ್ಧ ಕ್ರಮಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT