ಶಕ್ತಿನಗರ: ರಾಯಚೂರು ತಾಲ್ಲೂಕಿನ ಜಾಗಿರ ವೆಂಕಟಪುರ ಗ್ರಾಮಕ್ಕೆ ಶಾಸಕ ಬಸನಗೌಡ ದದ್ದಲ್ ಭೇಟಿ ನೀಡಿ ಈಚೆಗೆ ಕಾಲು ಜಾರಿ ಹಳ್ಳಕ್ಕೆ ಬಿದ್ದು ಮೃತರಾದ ಬಸವರಾಜ ಅವರ ಕುಟುಂಬಸ್ಥರಿಗೆ ₹5 ಲಕ್ಷದ ಚೆಕ್ ನೀಡಿದರು.
ಬಳಿಕ ಜಿಲ್ಲಾಧಿಕಾರಿಗಳ ಜತೆ ಹಳ್ಳವನ್ನು ಪರಿಶೀಲಿಸಿ ಮುಂಬರುವ ದಿನಗಳಲ್ಲಿ ಬ್ರಿಡ್ಜ್ ಮತ್ತು ರಸ್ತೆ ಕಾಮಗಾರಿಗಳ ಬಗ್ಗೆ ಚರ್ಚಿಸಿದರು.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದರು