ಭಾನುವಾರ, ಸೆಪ್ಟೆಂಬರ್ 26, 2021
21 °C

ಮಸ್ಕಿ: ಕೋತಿ ಕಚ್ಚಿ 5 ಜನರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಸ್ಕಿ: ಪಟ್ಟಣದ ವಿವಿಧೆಡೆ ಕೋತಿಯೊಂದು ಓಡಾಡಿಕೊಂಡು ಜನರನ್ನು ಗಾಬರಿಗೊಳಿಸಿದ್ದಲ್ಲದೆ, ಐದು ಜನರನ್ನು ಕಚ್ಚಿ ಗಾಯಗೊಳಿಸಿದ ಘಟನೆ ಭಾನುವಾರ ನಡೆದಿದೆ.

ತೇರು ಬೀದಿ‌ ರಸ್ತೆ ಮುಖಾಂತರ ತೆರಳುತ್ತಿದ್ದ ಇಬ್ಬರು ಬಾಲಕರು ಸೇರಿ ಜನರ ಕೈಗಳಿಗೆ ಮತ್ತು ಕಾಲುಗಳಿಗೆ ಪರಿಚಿದ್ದಲ್ಲದೆ, ಕಚ್ಚಿದೆ. ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾರ್ವಜನಿಕರು ಸ್ಥಳೀಯ ಪೊಲೀಸ್ ಠಾಣೆಗೆ ಸುದ್ದಿ ಮುಟ್ಟಿಸಿದ್ದಾರೆ.

ಅರಣ್ಯ ಇಲಾಖೆಗೆ ಈ ಕುರಿತು ವರದಿ ನೀಡಲಾಗಿದ್ದು ಕೋತಿಗಳನ್ನು ಹಿಡಿದು ಹೊರ ಸಾಗಿಸುವಂತೆ ಸೂಚಿಸಲಾಗಿದೆ ಎಂದು ಪಿಎಸ್‌ಐ ಸಿದ್ದರಾಮ ತಿಳಿಸಿದ್ದಾರೆ.

ಪಟ್ಟಣದಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದ್ದು ಜನ ಭಯಭೀತರಾಗಿದ್ದಾರೆ. ಕೂಡಲೇ ಕೋತಿಗಳನ್ನು ಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು‌ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು