ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಂಧನೂರು: ಪಿಕಾರ್ಡ್ ಬ್ಯಾಂಕ್ ಸೇರಿ 5 ಕಡೆ ಸರಣಿ ಕಳವು

Published : 16 ಆಗಸ್ಟ್ 2024, 14:31 IST
Last Updated : 16 ಆಗಸ್ಟ್ 2024, 14:31 IST
ಫಾಲೋ ಮಾಡಿ
Comments

ಸಿಂಧನೂರು: ನಗರದ ಪಿಕಾರ್ಡ್ ಬ್ಯಾಂಕ್, ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿ ಸೇರಿದಂತೆ 5 ಕಡೆ ಗುರುವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ.

ಪಿಕಾರ್ಡ್ ಬ್ಯಾಂಕ್‍ನಲ್ಲಿ ₹40 ಸಾವಿರ, ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ₹10 ಸಾವಿರ ಕಳವು ಮಾಡಲಾಗಿದೆ. ಕಳ್ಳರು ಎಲ್.ಐ.ಸಿ. ಪ್ರೀಮಿಯಮ್ ಕಚೇರಿ, ಗೊಬ್ಬರದ ಅಂಗಡಿ, ಬಟ್ಟೆ ಅಂಗಡಿ–ಮುಂಗಟ್ಟುಗಳನ್ನು ತೆರೆದಿದ್ದಾರೆ. ಯಾವುದೇ ವಸ್ತುಗಳನ್ನು ಕದ್ದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶುಕ್ರವಾರ ಬೆಳಿಗ್ಗೆ ಡಿವೈಎಸ್‍ಪಿ ಬಿ.ಎಸ್.ತಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಅಂಗಡಿಗಳ ಬೀಗ ಮುರಿದು ಒಳಗೆ ನುಗ್ಗಿ ಕಳ್ಳತನಕ್ಕೆ ಪ್ರಯತ್ನಿಸಿದ್ದಾರೆ. ಪ್ರತಿಯೊಂದು ಅಂಗಡಿಗಳಲ್ಲಿ ವಸ್ತುಗಳಿದ್ದು, ಅವುಗಳನ್ನು ಕದ್ದಿರುವುದಿಲ್ಲ. ಎರಡು ಹಣಕಾಸು ಸಂಸ್ಥೆಗಳ ಕ್ಯಾಶ್ ಕೌಂಟರ್‌ನಲ್ಲಿದ್ದ ಹಣವನ್ನು ಮಾತ್ರ ಕದ್ದೊಯ್ದಿದ್ದಾರೆ. ಬೆರಳಚ್ಚುಗಾರರನ್ನು ಕರೆಯಿಸಿ ಪರಿಶೀಲನೆ ಮಾಡಿದ ನಂತರ ಕಳ್ಳರನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗುವುದು. ಸಿಸಿ ಟಿವಿ ಕ್ಯಾಮೆರಾದಲ್ಲಿ ಕಳ್ಳತನದ ದೃಶ್ಯ ಸೆರೆಯಾಗಿರುವುದರಿಂದ ಸುಲಭವಾಗಿ ಕಳ್ಳರನ್ನು ಪತ್ತೆ ಹಚ್ಚಬಹುದು’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರಕರಣ ದಾಖಲಾಗಿರುವುದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT