ಶುಕ್ರವಾರ, ನವೆಂಬರ್ 27, 2020
19 °C

ಮಸ್ಕಿ ಕ್ಷೇತ್ರದಲ್ಲಿ 5 ಸಾವಿರ ಮನೆಗಳು ನಿರ್ಮಾಣ: ಸಚಿವ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಮುಂಬರುವ ಉಪಚುನಾವಣೆ ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಸಂಘಟನೆಗಾಗಿ ಆಗಮಿಸಿರುವ ವಸತಿ ಸಚಿವ ವಿ.ಸೋಮಣ್ಣ ಅವರು, ಕ್ಷೇತ್ರದಲ್ಲಿ ಐದು ಸಾವಿರ ಹೊಸ ಮನೆಗಳನ್ನು ನಿರ್ಮಿಸಿ ಕೊಡುವುದು ಸೇರಿ ಹಲವು ಭರವಸೆಗಳನ್ನು ನೀಡಿದರು.

ಬುಧವಾರ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಕ್ಷೇತ್ರವನ್ನು ಗುಡಿಸಲು ಮುಕ್ತ ಮಾಡುತ್ತೇವೆ. ಕ್ಷೇತ್ರದಲ್ಲಿ ಕೃಷ್ಣಾ ಬಲದಂಡೆ ನಾಲೆಗೆ 5ಎ ಉಪಕಾಲುವೆ ನಿರ್ಮಾಣಕ್ಕೆ ಸಿದ್ಧತೆ ಮಾಡಲಾಗಿದ್ದು, ಬೇಗನೆ ಪೂರ್ಣಗೊಳಿಸುತ್ತೇವೆ. ಮುಂದಿನ ಎರಡು ತಿಂಗಳಲ್ಲಿ ಮದಲೂರು ಕೆರೆ ತುಂಬಿಸಲಾಗುವುದು. ನಂದವಾಡಗಿ ಏತನೀರಾವರಿ ಯೋಜನೆ ಪೂರ್ಣಗೊಳಿಸಲಾಗುವುದು’ ಎಂದರು.

‘ಮಸ್ಕಿ ಕ್ಷೇತ್ರದ ಜನರಿಗೆ ಸಚಿವ ಸ್ಥಾನದ ಅಪೇಕ್ಷೆ ಇದೆ. ಪ್ರತಾಪಗೌಡ ಪಾಟೀಲ ಅವರು ಶಾಸಕರಾಗಿ ಆಯ್ಕೆಯಾದ ಒಂದು ವಾರದಲ್ಲಿ ಸಚಿವರನ್ನಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾಡಲಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು