ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7ನೇ ತರಗತಿ ಪಬ್ಲಿಕ್ ಪರೀಕ್ಷೆ ವಿರೋಧಿಸಿ ಮನವಿ

Last Updated 29 ಅಕ್ಟೋಬರ್ 2019, 12:00 IST
ಅಕ್ಷರ ಗಾತ್ರ

ತುರ್ವಿಹಾಳ: ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ, ಈಚೆಗೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು, ತಹಶೀಲ್ದಾರ್‌ ಮೂಲಕ ರಾಜ್ಯ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.

ಪಟ್ಟಣದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಜಿಲ್ಲಾ ಮುಖಂಡ ರಮೇಶ ಮಾತನಾಡಿ, 7ನೇ ತರಗತಿ ವಿದ್ಯಾರ್ಥಿಗಳಿಗೆ, ಪಬ್ಲಿಕ್ ಪರೀಕ್ಷೆ ನಡೆಸುವುದು ಒಕ್ಕೂಟ ರಾಷ್ಟ್ರಗಳ ಮಕ್ಕಳ ಹಕ್ಕುಗಳ ಸಮಿತಿಯ ನಿಯಮಗಳ ಉಲ್ಲಂಘನೆಯಾಗುತ್ತದೆ. ಅವೈಜ್ಞಾನಿಕವಾದ ಈ ನಿರ್ಧಾರವನ್ನು ರದ್ದುಗೊಳಿಸಿ, ಪಾಲಕರು ಮತ್ತು ಶಿಕ್ಷಣ ತಜ್ಞರ ಜೊತೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು

ವಿದ್ಯಾರ್ಥಿ ಮುಖಂಡ ಹುಲ್ಲೇಶರೆಡ್ಡಿ ತುರ್ವಿಹಾಳ ಮಾತನಾಡಿ, ಪಬ್ಲಿಕ್ ಪರೀಕ್ಷೆಯ ಭಯದಿಂದ ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆ ಕುಂಠಿತವಾಗುತ್ತದೆ. ಮೂಲಸೌಲಭ್ಯಗಳಿಂದ ವಂಚಿತ ಪ್ರದೇಶಗಳಿಂದ ಬಂದಂತಹ ಮಕ್ಕಳನ್ನು ಮಾನಸಿಕವಾಗಿ ಕುಗ್ಗಿಸಿದಂತಾಗುತ್ತದೆ ಎಂದು ಹೇಳಿದರು.

ವಿದ್ಯಾರ್ಥಿಗಳಾದ ಹುಲ್ಲೇಶರೆಡ್ಡಿ, ಆದೇಶಗೌಡ, ನಾಗರಾಜ ಅಗಸ್ತ್ಯ, ಸೋಮನಾಥ, ಮರಿಸ್ವಾಮಿ, ಬಾಲಪ್ಪ, ರಾಜು, ಮರಿಯಪ್ಪ, ಅರಳಯ್ಯ, ರವಿಚಂದ್ರ ನಾಯಕ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT