ರಾಯಚೂರು: ತಾಲ್ಲೂಕಿನ ಅಪ್ಪನದೊಡ್ಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಪಾತ್ರೆಯಲ್ಲಿ ಹಲ್ಲಿ ಬಿದ್ದಿದ್ದ ಉಪ್ಪಿಟ್ಟು ಸೇವಿಸಿ 70 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ 40 ಹಾಗೂ 30 ವಿದ್ಯಾರ್ಥಿಗಳು ರಾಯಚೂರು ತಾಲ್ಲೂಕಿನ ಯಾಪಲದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಹುತೇಕ ಮಕ್ಕಳು ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಅಡುಗೆ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಅನಾಹುತ ಉಂಟಾಗಿದೆ. ಉಪ್ಪಿಟು ಮಾಡಿದ ನಂತರ ಪಾತ್ರೆ ಮುಚ್ಚಿರಲಿಲ್ಲ. ಹಲ್ಲಿ ಬಿದ್ದ ಉಪ್ಪಿಟ್ಟು ಸೇವಿಸಿದ ತಕ್ಷಣ ಮಕ್ಕಳು ವಾಂತಿ ಮಾಡಲು ಶುರು ಮಾಡಿದ್ದರು. ಶಾಲೆಯ ಶಿಕ್ಷಕರು ಮಕ್ಕಳನ್ನು ಯಾಪಲದಿನ್ನಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳನ್ನು ರಾಯಚೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಶಾಲೆಗೆ ಭೇಟಿ ನೀಡಿ ಬಿಸಿಯೂಟದ ಕೋಣೆ ಹಾಗೂ ಆಹಾರ ಧಾನ್ಯಗಳನ್ನು ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.