ರಾಯಚೂರು: ರಾಯಚೂರು ನಗರಕ್ಕೆ ವರ್ತುಲ ರಸ್ತೆ ನಿರ್ಮಾಣಕ್ಕೆ ಬಜೆಟ್ ಮೂಲಕ ರಾಜ್ಯ ಸರ್ಕಾರ ₹80 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.
ಜಿಲ್ಲಾ ಪೊಲೀಸ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾನುವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಜಿಲ್ಲೆಗೆ ಕಳೆದ ನಾಲ್ಕು ವರ್ಷಗಳಲ್ಲಿ ₹114 ಕೋಟಿ ಬಿಡುಗಡೆಯಾಗಿದ್ದು, ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ ಎಂದರು.
ವಸತಿ ಇಲಾಖೆಯಲ್ಲೂ ಕಳೆದ ಎರಡು ವರ್ಷಗಳಲ್ಲಿ ಅಭೂತ ಸಾಧನೆಯಾಗಿದೆ. 3.12 ಲಕ್ಷ ಕೊಳೆಗೇರಿ ಕುಟುಂಬಗಳಿಗೆ ಮಾಲೀಕತ್ವ ನೀಡಲಾಗುತ್ತಿದೆ. 9.74 ಲಕ್ಷ ಮನೆಗಳ ನಿರ್ಮಾಣಕ್ ₹10,194 ಕೋಟಿ ಅನುದಾನ ಮೀಸಲಿಡಲಾಗಿದೆ. ಆಶ್ರಯ ಬಡಾವಣೆಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ₹500 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.