9 (ಎ) ಕಾಲುವೆ ಕಾಮಗಾರಿ ಸ್ಥಳ ಪರಿಶೀಲನೆ

ಕವಿತಾಳ: ನಾರಾಯಣಪುರ ಬಲದಂಡೆ 9 (ಎ) ವಿತರಣಾ ಕಾಲುವೆ ಕಾಮಗಾರಿ ಸ್ಥಳಕ್ಕೆ ಶಾಸಕ ರಾಜಾವೆಂಕಟಪ್ಪ ನಾಯಕ ಅವರು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಕಳೆದ 13 ವರ್ಷಗಳಿಂದ ಕಾಮಗಾರಿ ನನೆಗುದಿಗೆ ಬಿದ್ದಿದ್ದು ಕಾಮಗಾರಿ ಪುನರ್ ಆರಂಭಕ್ಕೆ ಶೀಘ್ರ ಕ್ರಮ ಕೈಗೊಳ್ಳಬೇಕು. ಕಾಲುವೆ ನಿರ್ಮಾಣಕ್ಕೆ ಅಗತ್ಯ ಭೂಮಿ ನೀಡಿದ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
‘ಅರಣ್ಯ ಇಲಾಖೆ ವ್ಯಾಪ್ತಿಯ ಭೂಮಿಯಲ್ಲಿ ನಾಲೆ ಹಾಯ್ದು ಹೋಗುವ ಕುರಿತು ಇಲಾಖೆ ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಿದ ಕಾರಣ ಅರಣ್ಯ ಇಲಾಖೆಗೆ ಪರ್ಯಾಯ ಭೂಮಿ ನೀಡಲು ಕ್ರಮ ಕೈಗೊಳ್ಳಲಾಗುವುದು. ಹೀಗಾಗಿ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಿ ಶೀಘ್ರ ಕಾಮಗಾರಿ ಆರಂಭಕ್ಕೆ ಮುಂದಾಗಬೇಕು’ ಎಂದು ಹೇಳಿದರು.
ತಹಶೀಲ್ದಾರ್ ವಿಜಯೇಂದ್ರ ಹುಲಿ ನಾಯಕ, ಕೃಷ್ಣ ಭಾಗ್ಯ ಜಲ ನಿಗಮದ ಎಂಜಿನಿಯರ್ ಮನೋಹರ, ವಲಯ ಅರಣ್ಯ ಅಧಿಕಾರಿ ರಾಜೇಶ, ಮುಖಂಡರಾದ ಮಲ್ಲಿಕಾರ್ಜುನ ಪಾಟೀಲ್, ಅಮರೇಶ ಚಾಗಭಾವಿ, ಶಿವರಾಜ, ವೆಂಕಟೇಶ, ರವಿ ಕುಮಾರ, ಚಂದ್ರಶೇಖರ, ವೆಂಕೋಬ, ದುರುಗಪ್ಪ, ಕೆಂಚಪ್ಪ, ರಾಮಣ್ಣ ಮತ್ತಿತರರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.