ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಮಂದಿರದ ಚಿತ್ರ ತಿರುಚಿದ ಯುವಕನ ಬಂಧನ

Published 24 ಜನವರಿ 2024, 16:12 IST
Last Updated 24 ಜನವರಿ 2024, 16:12 IST
ಅಕ್ಷರ ಗಾತ್ರ

ದೇವದುರ್ಗ (ರಾಯಚೂರು ಜಿಲ್ಲೆ): ಅಯೋಧ್ಯೆಯ ರಾಮಮಂದಿರದ ಚಿತ್ರ ತಿರುಚಿ ಹಸಿರು ಧ್ವಜ ಅಳವಡಿಸಿ ವಾಟ್ಸ್‌ಆ್ಯಪ್‌ ಡಿಪಿಯಲ್ಲಿ ಹಾಕಿಕೊಂಡಿದ್ದ ಹಾಗೂ ಇನ್‌ಸ್ಟ್ರಾಗ್ರಾಂನಲ್ಲೂ ಚಿತ್ರ ಹರಿಯ ಬಿಟ್ಟ ಮಸರಕಲ್ ಗ್ರಾಮದ ಸೈಯದ್ ಪಾಶಾ ಎಂಬಾತನನ್ನು ಗಬ್ಬೂರ್‌ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಜನವರಿ 22ರಂದು ಅಯೋಧ್ಯೆಯಲ್ಲಿ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ದಿನವೇ ರಾಮಮಂದಿರದ ಚಿತ್ರವನ್ನು ತಿರುಚಿ ವಾಟ್ಸ್‌ಆ್ಯಪ್‌ ಡಿಪಿಯಲ್ಲಿ ಹಾಕಿಕೊಂಡಿದ್ದ. ‘ಇದೇ ಇಸ್ಲಾಮಿಕ್‌ ಪವರ್‌’ ಎಂದು ಬರೆದುಕೊಂಡಿದ್ದ. ಇದನ್ನು ಗಮನಿಸಿದ್ದ ಗ್ರಾಮದ ಯುವಕರು ಆಕ್ಷೇಪ ವ್ಯಕ್ತಪಡಿಸಿದ್ದರು. ನಂತರ ಗಬ್ಬೂರ್‌ ಪೊಲೀಸ್‌ ಠಾಣೆಯ ಎದುರು ಪ್ರತಿಭಟಿಸಿದ್ದರು. ಬಳಿಕ ಪೊಲೀಸರು ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT