ಅಧಿಸೂಚಿತ ಪ್ರದೇಶ ಸಮಿತಿ ವತಿಯಿಂದ 2012-13ನೇ ಸಾಲಿನಲ್ಲಿ ಸಿಎಫ್‌ಸಿ ಯೋಜನೆಯಡಿ ₹ 15 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಉದ್ಘಾಟನೆ ಆಗದೆ ಇರುವುದರಿಂದ ಹೈಟೆಕ್ ಶೌಚಾಲಯ ಸುತ್ತಲೂ ಮುಳ್ಳುಗಟ್ಟಿಗಳು ಬೆಳೆದು ನಿಂತಿವೆ. ಇದರಿಂದ ಶೌಚಾಲಯ ಸಾರ್ವಜನಿಕರಿಗೆ ಪ್ರಯೋಜನಕ್ಕೆ ಬಾರದಂತಾಗಿದೆ. ಧಾರುವಾಲ ಕ್ರೀಡಾಂಗಣಕ್ಕೆ ವಾಯುವಿಹಾರಕ್ಕೆ ಬರುವ ಮಹಿಳೆಯರು, ಮಕ್ಕಳಿಗೆ ಉಪಯೋಗವಾಗಬೇಕಿದ್ದ ಹೈಟೆಕ್ ಶೌಚಾಲಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪಾಳುಬಿದ್ದಿದೆ.