ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Published : 29 ಸೆಪ್ಟೆಂಬರ್ 2024, 15:46 IST
Last Updated : 29 ಸೆಪ್ಟೆಂಬರ್ 2024, 15:46 IST
ಫಾಲೋ ಮಾಡಿ
Comments

ಸಿರವಾರ: ಪಟ್ಟಣದ ಲಿಂಗಸಗೂರು ಮುಖ್ಯರಸ್ತೆಯ ಬಂಗ್ಲೆ ಹಳ್ಳದ ಹತ್ತಿರ ದ್ವಿಚಕ್ರವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಯುವಕ ಸಾವನ್ನಪ್ಪಿದ್ದು, ಹಿಂದೆ ಕುಳಿತಿದ್ದ ವ್ಯಕ್ತಿಗೆ ಗಂಭೀರ ಗಾಯಗಳಾದ ಘಟನೆ ಭಾನುವಾರ ಸಂಜೆ ನಡೆದಿದೆ.

ತಾಲ್ಲೂಕಿನ ಕೆ.ಗುಡದಿನ್ನಿ ಗ್ರಾಮದ ಚನ್ನಪ್ಪ ತಂದೆ ಯಂಕೋಬ(27) ಮೃತ ಯುವಕ. ಚನ್ನಬಸವ ಗಂಭೀರವಾದ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.

ಲಾರಿ ಚಾಲಕನನ್ನು ಬಂಧಿಸಲಾಗಿದ್ದು, ಸ್ಥಳಕ್ಕೆ ಸಿಪಿಐ ಎಂ.ಶಶಿಕಾಂತ, ಪಿಎಸ್‌ಐ ಅಮರೇಗೌಡ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT