ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು: ಪೊಲೀಸ್ ಠಾಣೆಗೆ ದೂರು ನೀಡಲು ಬಂದ ವ್ಯಕ್ತಿ ಸಾವು

Published 20 ಜೂನ್ 2024, 15:20 IST
Last Updated 20 ಜೂನ್ 2024, 15:20 IST
ಅಕ್ಷರ ಗಾತ್ರ

ರಾಯಚೂರು: ಕ್ಷುಲ್ಲಕ ಕಾರಣಕ್ಕೆ ಸಹೋದರನೊಂದಿಗೆ ಜಗಳವಾಡಿ ಗುರುವಾರ ಪೊಲೀಸ್‌ ಠಾಣೆಗೆ ದೂರು ಕೊಡಲು ಬಂದಿದ್ದ ವ್ಯಕ್ತಿಯೊಬ್ಬರು ದಿಢೀರ್‌ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ರಾಯಚೂರು ತಾಲ್ಲೂಕಿನ ನಾಗನದೊಡ್ಡಿ ಗ್ರಾಮದ ರಾಜು(55) ಹಾಗೂ ಕಿರಿಯ ಸಹೋದರ ಜಂಗ್ಲೆಪ್ಪ ಅವರ ಜಮೀನಿನಲ್ಲಿನ‌ ಕೊಳವೆಬಾವಿ ವಿಷಯವಾಗಿ ಬುಧವಾರ ಜಗಳವಾಗಿದೆ. ಈ ಸಂಬಂಧ ಸಹೋದರರಿಬ್ಬರೂ ಯಾಪಲದಿನ್ನಿ ಪೊಲೀಸ್ ಠಾಣೆಗೆ ದೂರು ಕೊಡಲು ಬಂದಿದ್ದರು.‌

ಇದೇ ವೇಳೆ ರಾಜು ಕುಸಿದು ಬಿದ್ದಿದ್ದಾರೆ. ಸಹೋದರ ಜಂಗ್ಲೆಪ್ಪ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿಯೇ ಪೊಲೀಸರು ನೀರು ಕುಡಿಸಿ ಬಳಿಕ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು. ದ್ವಿಚಕ್ರ ವಾಹನದಲ್ಲಿ ಯಾಪಲದಿನ್ನಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ರಾಜು ಮೃತಪಟ್ಟಿದ್ದಾರೆ. ಮೃತರಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು. ಇದರಿಂದ ಮೃತಪಟ್ಟಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT