ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು: ನಕಲು ಮಾಡುವಾಗ ಸಿಕ್ಕಿ ಬಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Published 29 ನವೆಂಬರ್ 2023, 15:37 IST
Last Updated 29 ನವೆಂಬರ್ 2023, 15:37 IST
ಅಕ್ಷರ ಗಾತ್ರ

ರಾಯಚೂರು: ರಾಯಚೂರು ವಿಶ್ವವಿದ್ಯಾಲಯದಲ್ಲಿ ರಸಾಯನ ವಿಜ್ಞಾನ ವಿಭಾಗದ ನಾಲ್ಕನೇ ಸೆಮಿಸ್ಟರ್‌ನ ವಿದ್ಯಾರ್ಥಿನಿ ಪರೀಕ್ಷೆ ವೇಳೆ ನಕಲು ಮಾಡುವಾಗ ಸಿಕ್ಕಿ ಬಿದ್ದಿದ್ದು, ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಪರೀಕ್ಷೆಯಲ್ಲಿ ನಕಲು ಮಾಡುತಿದ್ದ ಮೂವರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಡಿಬಾರ್ ಮಾಡಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿನಿ ವಿಶ್ವವಿದ್ಯಾಲಯದ ಕಟ್ಟಡ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿನಿಯನ್ನು ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಯರಗೇರಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT