ರಾಯಚೂರು: ಅಡುಗೆ ಅನಿಲ ದರ ಏರಿಕೆ ವಿರೋಧಿಸಿ ಆಮ್ ಆದ್ಮಿ ಪಾರ್ಟಿ (ಎಎಪಿ) ನಗರ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿ ಆನಂತರ ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ ಅಡುಗೆ ಅನಿಲ ದರ ₹50 ಹೆಚ್ಷಳ ಮಾಡಿದ್ದು ಖಂಡನೀಯ. ಮೂರು ತಿಂಗಳಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಹಾಗೂ ಅಡುಗೆ ಎಣ್ಣೆ ಹಾಗೂ ಅಗತ್ಯ ವಸ್ತುಗಳ ದರ ಏರಿಕೆಯಾಗಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ₹250 ಹಾಗೂ₹102 ಹೆಚ್ಚಿದ ಮಾಗಿದೆ.ದೇಶದ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿ, ಅದಾನಿ, ಏಷಿಯಾದಲ್ಲಿಯೇ ಮೊದಲೆರಡು ಸ್ಥಾನದಲ್ಲಿದ್ದಾರೆ. ಅಂಬಾನಿ ಆಸ್ತಿ 3-4 ಪಟ್ಟು ಹೆಚ್ಚಾಗಿದೆ. ಮೋದಿ ಸರ್ಕಾರ ಕಾರ್ಪೊರೇಟ್ ಪರವಾಗಿ ಕೆಲಸ ಮಾಡುತ್ತಿದೆ ಎಂದು ದೂರಿದರು.

ಯುಪಿಎ ಸರ್ಕಾರ ಅನುಸರಿಸಿದ ಬಂಡವಾಳಶಾಹಿ ನೀತಿ ಬಿಜೆಪಿ ಮುಂದುವರೆಸಿದೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಜನರ ಸಮಸ್ಯೆಗಳಿಗೆ ಮುಕ್ತಿ ಸಿಗುತ್ತಿಲ್ಲ. ಬಡವರು ಬಡವರಾಗಿಯೇ ಉಳಿಯುವ ಸ್ಥಿತಿ ನಿರ್ಮಾಣವಾಗಿದೆ.

ಬಡವರ ಸಮಸ್ಯೆಗಳಿಗೆ ಆಮ್ ಆದ್ಮಿ ಪಕ್ಷದ ಸ್ಪಂದಿಸುವ ಕೆಲಸ ಮಾಡುತ್ತಿದೆ. ದೆಹಲಿಯಲ್ಲಿ ಉಚಿತ ಶಿಕ್ಷಣ, ವೈದ್ಯಕೀಯ ಸೌಲಭ್ಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಅಟೋ ಚಾಲಕರಿಗೆ ಒಂದು ತಿಂಗಳಿಗೆ ಗ್ಯಾಸ್ ಸಿಲಿಂಡರ್ ಉಚಿತವಾಗಿ ನೀಡುತ್ತಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದೆ ಎಂದರು.

ನಗರ ಘಟಕದ ಅಧ್ಯಕ್ಷ ಡಿ.ವೀರೇಶಕುಮಾರ, ಕೆ.ಬಸವರಾಜ ಗುತ್ತೇದಾರ, ವೀರೇಶ ಆರ್. ಶಿವಯ್ಯ ಶೆಟ್ಟಿ, ಮಕ್ಬೂಲ್ ಪಾಶ, ಜಾವಿದ್ ಖಾನ್, ಆಸ್ತಾಕ್, ಸುನಿಲ್, ಗೌಸ್, ರಿಜವಾನ್, ಕೃಷ್ಣ,ಶಿವಾನಂದ, ವಿನೋದ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.