ಲಿಂಗಸುಗೂರು: ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ರಾಠೋಡ ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ್ದು ದೃಢಪಟ್ಟಿದ್ದರಿಂದ ಸೇವೆಯಿಂದ ಅಮಾನತುಗೊಳಿಸಿ ಚುನಾವಣಾಧಿಕಾರಿ ಚಂದ್ರಶೇಖರ ನಾಯಕ ಆದೇಶ ಹೊರಡಿಸಿದ್ದಾರೆ.

ರಾಯಚೂರು ಲೋಕಸಭಾ ವ್ಯಾಪ್ತಿ ಲಿಂಗಸುಗೂರು ತಾಲ್ಲೂಕು ಮುದಗಲ್ಲ ಹೋಬಳಿ ಮಟ್ಟದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಎಫ್ಎಸ್ಟಿ ತಂಡದಲ್ಲಿ ರಾಠೋಡ ಅವರನ್ನು ನಿಯೋಜಿಸಲಾಗಿತ್ತು.

ಏ.5 ರಿಂದ ಏ.7 ಅವಧಿಯಲ್ಲಿ ಪೂರ್ವಾನುಮತಿ ಪಡೆಯದೆ ಗೈರು ಆಗಿದ್ದಾರೆ. ಈ ಸಂದರ್ಭದಲ್ಲಿ ಇಲಾಖೆ ಸಿಬ್ಬಂದಿ ನಿಯೋಜಿಸಿ ತಾವೇ ಕರ್ತವ್ಯ ನಿಭಾಯಿಸಿದ್ದಾಗಿ ತಪ್ಪು ವರದಿ ಸಲ್ಲಿಸಿದ್ದಾರೆ. ಈ ಸಂಬಂಧ ದಲಿತ ಸಂಘರ್ಷ ಸಮಿತಿ ದೂರು ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.