ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲ್ಲೂಕು ಕಳ್ಳಿಲಿಂಗಸುಗೂರಿನಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಶನಿವಾರ ಆರಂಭವಾಗಿದ್ದು, ಜಿಲ್ಲಾಧಿಕಾರಿ ಬದಲು ಹೆಚ್ಚುವರಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಮಾಡಲು ಹಾಜರಾಗಿದ್ದಾರೆ.

ಗ್ರಾಮದ ನಾಗಲಿಂಗೇಶ್ವರ ದೇವಸ್ಥಾನದ ಎದುರು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ ಅವರು ಗ್ರಾಮಸ್ಥರಿಂದ ಮನವಿಗಳನ್ನು ಪಡೆಯುತ್ತಿದ್ದಾರೆ.

ಉಪವಿಭಾಗಾಧಿಕಾರಿ ರಾಜಶೇಖರ ಡಂಬಳ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದಾರೆ.

ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಇನ್ನೂ ಅಧಿಕಾರಿ ಸ್ವೀಕರಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.