ಎಸಿಬಿ ಅಧಿಕಾರಿಗಳಿಂದ ಭ್ರಷ್ಟಾಚಾರ ನಿಗ್ರಹ ಜಾಗೃತಿ

ಶನಿವಾರ, ಮೇ 25, 2019
22 °C

ಎಸಿಬಿ ಅಧಿಕಾರಿಗಳಿಂದ ಭ್ರಷ್ಟಾಚಾರ ನಿಗ್ರಹ ಜಾಗೃತಿ

Published:
Updated:

ರಾಯಚೂರು:  ಜಿಲ್ಲೆಯ ಮಾನ್ವಿ ತಾಲ್ಲೂಕಿನ ಉಪನೋಂದಣಾಧಿಕಾರಿಗಳ ಕಚೇರಿ, ತಹಸೀಲ್ದಾರ ಕಾರ್ಯಾಲಯ ಮತ್ತು ಪುರಸಭೆ ಕಾರ್ಯಾಲಯಕ್ಕೆ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ಉಪಾಧೀಕ್ಷಕ ಹರೀಶ ಜಿ., ಪೊಲೀಸ್ ಇನ್‌ಸ್ಪೆಕ್ಟರ್ ಎಚ್.ಬಿ. ಸಣಮನಿ ಮತ್ತು ಸಿಬ್ಬಂದಿ ಬುಧವಾರ ಭೇಟಿ ನೀಡಿ ಸಾರ್ವಜನಿಕರಿಗೆ ಕರ ಪತ್ರಗಳನ್ನು ಹಂಚುವುದರ ಮೂಲಕ ಭ್ರಷ್ಟಾಚಾರ ನಿಗ್ರಹ ದಳದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ಸರ್ಕಾರಿ ನೌಕರರು ನ್ಯಾಯಯುತವಾಗಿ ಮಾಡಬೇಕಾದ ಸಾರ್ವಜನಿಕ ಕೆಲಸಕ್ಕಾಗಿ ಲಂಚ ನೀಡುವಂತೆ ಒತ್ತಾಯಿಸುವುದು, ಲಂಚ ಪಡೆಯುವುದು, ಲಂಚದ ರೂಪದಲ್ಲಿ ಇತರೆ ಆಮಿಷಗಳಿಗೆ ಒತ್ತಾಯಿಸುವುದು, ಸಾರ್ವಜನಿಕ ಹುದ್ದೆಯನ್ನು ಬಳಸಿಕೊಂಡು ಬೇರೆ ರೀತಿಯ ಅವ್ಯವಹಾರಗಳನ್ನು ನಡೆಸುವುದು ನಡೆಯುತ್ತಿದ್ದರೆ  ಸಾರ್ವಜನಿಕರು ದೂರನ್ನು ಸಲ್ಲಿಸಬಹುದು ಎಂದು ಅರಿವು ಮೂಡಿಸಿದರು.

ಹೆಚ್ಚಿನ ಮಾಹಿತಿಗಾಗಿ ಡಿವೈಎಸ್‌ಪಿ ಹರೀಶ ಜಿ. 9480806317, ರಾಯಚೂರು ಘಟಕ ಪಿಐ. ಎಸಿಬಿ ಎಚ್.ಬಿ.ಸಣಮನಿ 9480806318 ಸಂಖ್ಯೆಗೆ ಸಂಪರ್ಕಿಸಬಹುದು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !